HomeLatest Newsಜುಲೈ 7ರಂದು ರಾಜ್ಯದ ಮಹಾನಗರ ಪಾಲಿಕೆಗಳ ನೌಕರರ ಸಾಮೂಹಿಕ ರಜೆ, ಪ್ರತಿಭಟನೆ

ಜುಲೈ 7ರಂದು ರಾಜ್ಯದ ಮಹಾನಗರ ಪಾಲಿಕೆಗಳ ನೌಕರರ ಸಾಮೂಹಿಕ ರಜೆ, ಪ್ರತಿಭಟನೆ

ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳ ಸಿಬ್ಬಂದಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ 7 ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆ ಬೇಡಿಕೆಗಳಿಗೆ ಸ್ಪಂದಿಸದಿರುವುದರಿಂದ ನೌಕರರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಂಡಿರುವುದಾಗಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಎ. ಅಮೃತ ರಾಜ್ ತಿಳಿಸಿದ್ದಾರೆ.

ಪಾಲಿಕೆಗಳ ಅಧಿಕಾರಿ, ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರಾಭಿವೃದ್ಧಿ ಸಚಿವರು ಮತ್ತು ಕಾರ್ಯದರ್ಶಿಗೆ ಅನೇಕ ಬಾರಿ ಮನವಿ ನೀಡಲಾಗಿದೆ. ಆದರೂ ಸ್ಪಂದಿಸಿಲ್ಲ. ಹೀಗಾಗಿ ಎಲ್ಲರೂ ಸಾಮೂಹಿಕ ರಜೆ ಹಾಕಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಿ ನೌಕರರಿಗೆ ನೀಡಿರುವ ಏಳನೇ ವೇತನ ಆಯೋಗದ ಸೌಲಭ್ಯ ನೀಡಬೇಕು, ಪಾಲಿಕೆಗಳ ಸಿಬ್ಬಂದಿಗೂ ಆರ್ಥಿಕ ಇಲಾಖೆಯಿಂದಲೇ ಅನುದಾನ ಬಿಡುಗಡೆ ಮಾಡಬೇಕು, ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಪ್ರಕಟಿಸಬೇಕು. ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆಜಿಐಡಿ ಮತ್ತು ಜಿಪಿಎಫ್ ಸೌಲಭ್ಯಗಳನ್ನು ಪಾಲಿಕೆಯ ನೌಕರರಿಗೂ ಜಾರಿಗೊಳಿಸಬೇಕು. ಆರೋಗ್ಯ ಸೌಲಭ್ಯದ ಜ್ಯೋತಿ ಸಂಜೀವಿನಿ/ ಆರೋಗ್ಯ ಸಂಜೀವಿನಿ ಯೋಜನೆಯನ್ನು ಪಾಲಿಕೆ ಸಿಬ್ಬಂದಿಗೆ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular