BIG UPDATE : ಮಧ್ಯಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ : ಮೃತರ ಸಂಖ್ಯೆ 6 ಕ್ಕೇರಿಕೆ, 59 ಮಂದಿಗೆ ಗಾಯ

ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಘರ್ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 6 ಕ್ಕೇರಿಕೆಯಾಗಿದ್ದು, 59 ಮಂದಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಗಾಯಗೊಂಡ ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿದೆ. ಸದ್ಯ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ಆಂಬ್ಯುಲೆನ್ ಜೊತೆ ಸ್ಥಳಕ್ಕೆ ದೌಡಾಯಿಸಿದೆ.

ಕಾರ್ಖಾನೆಯಿಂದ ಬೆಂಕಿಯ ಜ್ವಾಲೆ ತೀವ್ರಗೊಳ್ಳುತ್ತಿದ್ದು, ಬೆಂಕಿ ನಂದಿಸಲು ಹಲವು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿದೆ. ಘಟನೆ ಹಿನ್ನೆಲೆ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದು, ಪ್ರಾಣ ಉಳಿಸಿಕೊಳ್ಳಲು ಓಡುತ್ತಿರುವ ದೃಶ್ಯಗಳು ಸೆರೆಯಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read