ಮಂಗಳವಾರ ಮುಂಜಾನೆ ಡೆಹ್ರಾಡೂನ್ನಲ್ಲಿ ಭಾರೀ ಮಳೆಯಿಂದಾಗಿ ಮೇಘಸ್ಫೋಟ ಉಂಟಾಗಿ ಮನೆಗಳು ಮತ್ತು ರಸ್ತೆಗಳು ನಾಶವಾಗಿ, ಕಾರುಗಳು ಮತ್ತು ಅಂಗಡಿಗಳು ಕೊಚ್ಚಿಹೋಗಿದ್ದರಿಂದ ಇಬ್ಬರು ನಾಪತ್ತೆಯಾಗಿದ್ದಾರೆ.
ತಡರಾತ್ರಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಸಂತ್ರಸ್ತರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ಕಾಣೆಯಾದ ಇಬ್ಬರು ವ್ಯಕ್ತಿಗಳನ್ನು ಪತ್ತೆಹಚ್ಚಲು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರೆದಿವೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ, ಜಿಲ್ಲಾ ಮ್ಯಾಜಿಸ್ಟ್ರೇಟ್ ಸವಿನ್ ಬನ್ಸಾಲ್, ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಕುಂಕುಮ್ ಜೋಶಿ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಹಾನಿಯನ್ನು ಪರಿಶೀಲಿಸಿದರು. ಕಾಣೆಯಾದ ಇಬ್ಬರು ವ್ಯಕ್ತಿಗಳನ್ನು ಆದಷ್ಟು ಬೇಗ ಹುಡುಕಿ ರಕ್ಷಿಸುವಂತೆ ಅವರು ರಕ್ಷಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
You Might Also Like
TAGGED:ಡೆಹ್ರಾಡೂನ್