ತೆಲಂಗಾಣ : ತೆಲಂಗಾಣದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 12 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರ ಕುಟುಂಬದವರಿಗೆ ಸರ್ಕಾರದಿಂದ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.
ತೆಲಂಗಾಣದ ಪಶಮೈಲರಾಮ್ನಲ್ಲಿರುವ ಸಿಗಾಚಿ ರಾಸಾಯನಿಕ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ಸೋಮವಾರ ವರದಿ ಮಾಡಿದೆ. ವರದಿಯ ಪ್ರಕಾರ, ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ.
ಸ್ಫೋಟದಿಂದಾಗಿ ಸುಮಾರು 15 ರಿಂದ 20 ಜನರು ಗಾಯಗೊಂಡಿದ್ದಾರೆ ಎಂದು ತೆಲಂಗಾಣ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಅನೇಕ ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ಘಟನಾ ಸ್ಥಳದಲ್ಲಿ 11 ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದ್ದು, ಅಗ್ನಿಶಾಮಕ ಕಾರ್ಯಾಚರಣೆಗಳು ನಡೆಯುತ್ತಿವೆ. ಕಾರ್ಮಿಕರನ್ನು ಹುಡುಕಲು ಸ್ಥಳದಲ್ಲಿ ರಕ್ಷಣಾ ಮತ್ತು ಶೋಧ ತಂಡಗಳನ್ನು ಸಹ ನಿಯೋಜಿಸಲಾಗಿದೆ.

