ಬೆಂಗಳೂರು: ನಗರದ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 100ಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗೆ ಆಹುತಿಯಾಗಿ ಸುಟ್ಟು ಕರಕಲಾಗಿವೆ. ರಾಮಮೂರ್ತಿನಗರದಲ್ಲಿ ಸಂಭವಿಸಿದ ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ನಗರದ ರಾಮಮೂರ್ತಿನಗರದ ಎಲೆಕ್ಟ್ರಿಕ್ ಬೈಕ್ ಶೋರೂಂ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 100ಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ಕೆನ್ನಾಲಿಗೆಗೆ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಬೆಂಕಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಅವಘಡದಲ್ಲಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಹಾನಿಯಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಪ್ರಾಥಮಿಕ ಮಾಹಿತಿಯಂತೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅವಘಡಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.

