BIG NEWS: ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ

ಮುಂಬೈ: ಬಹುಮಹಡಿ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮುಂಬೈನ ಬಾಂದ್ರಾ ಪೂರ್ವದಲ್ಲಿ ನಡೆದಿದೆ.

ಬಾಂದ್ರಾದ ಬಿಕೆಸಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಕಟ್ಟಡ ತುಂಬೆಲ್ಲ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಮೊದಲು ಬಲರಾಮ ಕಟ್ಟಡದ ಬಳಿಯಿರುವ ಕೌಟುಂಬಿಕ ನ್ಯಾಯಾಲಯದ ಕಟ್ಟಡದಲ್ಲಿ ಬೆಂಕಿ ಕಾನಿಸಿಕೊಂಡಿದೆ. ಬಳಿಕ ಬೆಂಕಿ ಹೊತ್ತಿ ಉರಿಯಲಾರಂಭಿಸಿದೆ.

ಕಟ್ಟದದ ಸುತ್ತಮುತ್ತ ದಟ್ಟವಾದ ಹೊಗೆ ಆವರಿಸಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳಿಗೆ ಬೆಂಕಿಯಿಂದಾಗಿ ಗಾಯಗಳಾಗಿವೆ ಎಂದು ತಿಳಿದುಬಂದಿಲ್ಲ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read