HomeKarnatakaBREAKING NEWS: ಪಶ್ಚಿಮಘಟ್ಟಗಳ ಸೂಕ್ಷ್ಮ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು: ಬೆಂಕಿ ನಂದಿಸಲು ಹರಸಾಹಸ

BREAKING NEWS: ಪಶ್ಚಿಮಘಟ್ಟಗಳ ಸೂಕ್ಷ್ಮ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು: ಬೆಂಕಿ ನಂದಿಸಲು ಹರಸಾಹಸ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಉಂಟಾಗಿದೆ.

ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ವ್ಯಾಪಿಸಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಭಾಗದಲ್ಲಿ ಪ್ರದೇಶದಲ್ಲಿ ನೂರಾರು ಎಕರೆಗೆ ಕಾಡ್ಗಿಚ್ಚು ವ್ಯಾಪಿಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗೂ ಮಾಹಿತಿ ನೀಡಲಾಗಿದೆ.

ಭಾರೀ ಬೆಂಕಿಯ ಕಾರಣ ವನ್ಯಜೀವಿಗಳಿಗೂ ಅಪಾಯ ಎದುರಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ.  ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

(ಸಾಂದರ್ಭಿಕ ಚಿತ್ರ)

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular