ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕೆವಿನ್ ರೋಜರ್, ಥಾಮಸ್ ನವೀದ್ ಚೀಮ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಸಿಸಿಬಿ ಮಹದೇವಪುರ ಠಾಣೆಯಲ್ಲಿ ಪ್ರತ್ಯೇಕ ಕೇಸ್ ದಾಖಲಾಗಿದೆ.
ಆರೋಪಿಗಳು ದೆಹಲಿ ಮತ್ತು ಮುಂಬೈಯಿಂದ ಡ್ರಗ್ಸ್ ತರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಆರೋಪಿಗಳು ಹೆಬ್ಬಗೋಡಿಯ ಮನೆಯಲ್ಲಿ ಡ್ರಗ್ಸ್ ಡೀಲ್ ಮಾಡುತ್ತಿದ್ದರು ಎನ್ನಲಾಗಿದೆ. ವಾಟ್ಸಾಪ್ ಮೂಲಕ ಲೊಕೇಷನ್ ಡ್ರಾಪ್ ಮಾಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಬಂಧಿತರು ಟೆಕ್ಕಿಗಳು , ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು.