HomeLatest Newsಕಟ್ಟಡಗಳಿಗೆ ಒಸಿ/ ಸಿಸಿ ವಿನಾಯಿತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ವಿದ್ಯುತ್ ಗುತ್ತಿಗೆದಾರರ...

ಕಟ್ಟಡಗಳಿಗೆ ಒಸಿ/ ಸಿಸಿ ವಿನಾಯಿತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಬೆಂಗಳೂರು: ವಿದ್ಯುತ್ ಗುತ್ತಿಗೆದಾರರು, ವಿದ್ಯುತ್ ಗ್ರಾಹಕರ ವೇದಿಕೆಗಳು, ಕನ್ನಡಪರ ಸಂಘಟನೆಗಳು, ಕೈಗಾರಿಕೋದ್ಯಮಿಗಳ ಸಹಯೋಗದಲ್ಲಿ ರಾಜ್ಯ ವಿದ್ಯುತ್ ಗುತ್ತಿಗೆದಾರರು ಮತ್ತು ಗ್ರಾಹಕರ ಸಂಘ ಸೋಮವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ತಾತ್ಕಾಲಿಕ ಸಂಪರ್ಕ ಹೊಂದಿರುವ ಕಟ್ಟಡಗಳಿಗೆ ಒಸಿ, ಸಿಸಿ ವಿನಾಯಿತಿ ನೀಡುವುದು, ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವ ಸ್ಮಾರ್ಟ್ ಮೀಟರ್ ದರ ಇಳಿಸುವುದು, ಒಂದು ಲಕ್ಷ ರೂ.ನಿಂದ 5 ಲಕ್ಷ ರೂಪಾಯಿವರೆಗಿನ ಕಾಮಗಾರಿಗಳ ತುಂಡುಗುತ್ತಿಗೆ ನೀಡುವುದು, ರೈತರ ಕೃಷಿ ನೀರಾವರಿ ಪಂಪ್ ಸೆಟ್ ಗಳಿಗೆ ನಿರಂತರ ವಿದ್ಯುತ್ ಪೂರೈಕೆ, ಅಕ್ರಮ -ಸಕ್ರಮ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ.

ಬೆಸ್ಕಾಂ ಆನ್ಲೈನ್ ಪೋರ್ಟಲ್ ನಲ್ಲಿ ವಿದ್ಯುತ್ ಗುತ್ತಿಗೆದಾರರ ಸಮಾಪನ ವರದಿ ಕಡ್ಡಾಯಗೊಳಿಸಬೇಕು. ಪರವಾನಿಗೆ ಪಡೆದ ವಿದ್ಯುತ್ ಗುತ್ತಿಗೆದಾರರನ್ನು ಮಧ್ಯವರ್ತಿ ಪದ ತೆಗೆದು ವಿದ್ಯುತ್ ಗುತ್ತಿಗೆದಾರರು ಎಂದು ನಮೂದಿಸಬೇಕು. ಬೆಸ್ಕಾಂ, ಮೆಸ್ಕಾಂ, ಸೇರಿದಂತೆ ಎಸ್ಕಾಂ ಉಗ್ರಾಣಗಳಲ್ಲಿ ಲೈನ್ ಕಾಮಗಾರಿಗಳ ಸಾಮಗ್ರಿಗಳ ಕೊರತೆ ನೀಗಿಸಬೇಕು ಎಂದು ಒತ್ತಾಯಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular