ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಭಾರಿ ದಾಳಿ: 1200 ಮೆ.ಟನ್ ಮರಳು ವಶ

ಕೊಪ್ಪಳ: ಕೊಪ್ಪಳ ತಾಲ್ಲೂಕಿನ ಅಳವಂಡಿ ಹೋಬಳಿ ಚಿಕ್ಕಸಿಂದೋಗಿ, ಹಿರೇಸಿಂದೋಗಿ, ಬೂದಿಹಾಳ, ಗೊಂಡಬಾಳ ಹಾಗೂ ಕಾಟ್ರಳ್ಳಿ ಗ್ರಾಮಗಳ ವ್ಯಾಪ್ತಿಯ ಹಿರೇಹಳ್ಳದಲ್ಲಿ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಗಟ್ಟಲು ಭಾರಿ ದಾಳಿ ನಡೆಸಲಾಗಿದೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆ, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಪಂಚಾಯತ್ ರಾಜ್ಯ ಅಧಿಕಾರಿಗಳ ಸಂಯುಕ್ತ ಕಾರ್ಯಾಚರಣೆಯಲ್ಲಿ ಒಟ್ಟು 38 ಗುಂಡಿ ಆಕಾರದ ರಚನೆಗಳನ್ನು ನಾಶಪಡಿಸಲಾಗಿದೆ. ಲೋಕೋಪಯೋಗಿ ಇಲಾಖೆಯ ಸಮಕ್ಷಮದಲ್ಲಿ ಅಕ್ರಮವಾಗಿ ಶೇಖರಿಸಿದ್ದ 1200 ಮೆಟ್ರಿಕ್ ಟನ್ ಮರಳನ್ನು ವಶಪಡಿಸಿಕೊಂಡು ಇಲಾಖೆಯ ವಶಕ್ಕೆ ನೀಡಲಾಗಿದೆ.

 ಅಕ್ರಮ ಮರಳು ಗಣಿಗಾರಿಕೆಗೆ ಬಳಸಲು ಹಿರೇಹಳ್ಳದ ಪಕ್ಕದ ಜಮೀನಿನಲ್ಲಿ ನಿಲ್ಲಿಸಿದ್ದ 2 ಬೋಟ್‌ಗಳನ್ನು ಜೆಸಿಬಿ ಸಹಾಯದಿಂದ ಧ್ವಂಸಗೊಳಿಸಲಾಗಿದೆ. ಒಟ್ಟು 56 ಭೂಮಾಲೀಕರ ಮೇಲೆ ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಹಿಂದೆ 2025ರ ಜೂನ್ 24 ಮತ್ತು ಸೆಪ್ಟೆಂಬರ್ 4ರಂದು ಸಹ ಇದೇ ರೀತಿಯ ದಾಳಿ ನಡೆಸಿ ನಾಲ್ಕು ಪ್ರಕರಣಗಳನ್ನು ದಾಖಲಿಸಿ ರೂ. 6,07,031 ಗಳ ದಂಡ ವಸೂಲಾತಿ ಮಾಡಲಾಗಿದೆ ಎಂದು ಕೊಪ್ಪಳ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read