HomeKarnatakaBIG NEWS : ರಾಜ್ಯಾದ್ಯಂತ ಮುಂದಿನ 5 ದಿನ ಗರಿಷ್ಠ ಉಷ್ಣಾಂಶದಲ್ಲಿ ಭಾರಿ ಏರಿಕೆ :...

BIG NEWS : ರಾಜ್ಯಾದ್ಯಂತ ಮುಂದಿನ 5 ದಿನ ಗರಿಷ್ಠ ಉಷ್ಣಾಂಶದಲ್ಲಿ ಭಾರಿ ಏರಿಕೆ : ಹವಾಮಾನ ಇಲಾಖೆ ಮುನ್ಸೂಚನೆ.!

ರಾಜ್ಯಾದ್ಯಂತ ಮುಂದಿನ 5 ದಿನ ಗರಿಷ್ಟ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಈ ಬಾರಿ ಹಿಂದೆಂದೂ ಕಂಡರಿಯದಂತಹ ಸುಡು ಬಿಸಿಲು ಜನಸಾಮಾನ್ಯರನ್ನು ಕಂಗೆಡಿಸಿದೆ. 10 ಗಂಟೆಯ ಬಳಿಕ ಹೊರಗೆ ಹೋಗಲೂ ಸಹ ಹಿಂದೇಟು ಹಾಕುವಂತಾಗಿದ್ದು, ತಾಪಮಾನದಿಂದ ಜನರು ಹೈರಾಣಾಗಿದ್ದಾರೆ. ಫೆಬ್ರವರಿಯಲ್ಲೇ ಕೆಲವು ಜಿಲ್ಲೆಗಳಲ್ಲಿ 30-35 ಡಿಗ್ರೀ ಸೆ.ತಾಪಮಾನ ದಾಖಲಾಗುತ್ತಿದೆ.

ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಬಿಸಲು ಹಾಗೂ ಸೆಕೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನ ಕರಾವಳಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರೀ ಸೆ.ಹೆಚ್ಚಳವಾಗಲಿದೆ. ಉತ್ತರ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ 2 ರಿಂದ 4 ಡಿಗ್ರೀ ಸೆ,ಉಷ್ವಾಂಶ ಹೆಚ್ಚಳವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular