HomeEntertainment'ಮ್ಯಾಟ್ನಿ' ಚಿತ್ರದ 'ನಿನಗಾಗೇ ಮಿಡಿಯುವುದು' ಹಾಡು ರಿಲೀಸ್

‘ಮ್ಯಾಟ್ನಿ’ ಚಿತ್ರದ ‘ನಿನಗಾಗೇ ಮಿಡಿಯುವುದು’ ಹಾಡು ರಿಲೀಸ್

ಮನೋಹರ್ ಕಾಂಪಲ್ಲಿ ನಿರ್ದೇಶನದ ಬಹುನಿರೀಕ್ಷಿತ ‘ಮ್ಯಾಟ್ನಿ’ ಚಿತ್ರ ಮುಂದಿನ ತಿಂಗಳು ಏಪ್ರಿಲ್ 5ಕ್ಕೆ ರಾಜ್ಯದ್ಯಂತ ತೆರೆ ಮೇಲೆ ಬರಲಿದ್ದು, ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರದ ‘ನಿನಗಾಗೇ ಮಿಡಿಯುವುದು’ ಎಂಬ ಮೆಲೋಡಿ ಹಾಡು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಸಾದ್ವಿನಿ ಕೊಪ್ಪ ಧ್ವನಿಯಾಗಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜನೆ ನೀಡಿದ್ದಾರೆ. ಹೇಮಂತ್ ಕುಮಾರ್ ಮತ್ತು ಗಂಜಂ ಸಾಹಿತ್ಯ ಬರೆದಿದ್ದಾರೆ.

ಈ ಚಿತ್ರದಲ್ಲಿ ಸತೀಶ್ ನೀನಾಸಂ ಜೊತೆ ಡಿಂಪಲ್ ಕ್ವೀನ್ ರಚಿತಾ ರಾಮ್ ಮತ್ತು ಅದಿತಿ ಪ್ರಭುದೇವ ನಾಯಕಿಯರಾಗಿ ಅಭಿನಯಿಸಿದ್ದು, ದಿಗಂತ್ ದಿವಾಕರ್, ಪೂರ್ಣಚಂದ್ರ ಮೈಸೂರು, ನಾಗಭೂಷಣ್, ಶಿವರಾಜ್ ಕೆಆರ್ ಪೇಟೆ, ತೆರೆ ಹಂಚಿಕೊಂಡಿದ್ದಾರೆ. ಕೆ ಪ್ರಕಾಶ್ ಸಂಕಲನ ಸುಧಾಕರ್ ರಾಜ್ ಛಾಯಾಗ್ರಹಣವಿದೆ. F3 ಪ್ರೊಡಕ್ಷನ್ ಬ್ಯಾನರ್ ನಲ್ಲಿ ಪಾರ್ವತಿ ಗೌಡ ನಿರ್ಮಾಣ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular