‘ಮೌಲಾನಾ ಆಜಾದ್’ ಮಾದರಿ ಶಾಲೆಯ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 2024-25 ನೇ ಸಾಲಿನ 6ನೇ ತರಗತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14-04-2024 ಕಡೆಯ ದಿನವಾಗಿದ್ದು ಅರ್ಹ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5ನೇ ತರಗತಿ ವ್ಯಾಸಂಗ ಮಾಡುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅಂಕ ಪಟ್ಟಿಯನ್ನು ಹೊಂದಿರಬೇಕು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. 9 ರಿಂದ 13 ವರ್ಷದ ವಯೋಮಾನದವರಾಗಿರಬೇಕು. ವಿದ್ಯಾರ್ಥಿಯು ಎಸ್.ಎ.ಟಿ.ಎಸ್ ಸಂಖ್ಯೆ, ಇತ್ತಿಚಿನ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಅಂಗವಿಕಲ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು.

ಮಂಜೂರಾತಿ ವಿದ್ಯಾರ್ಥಿಗಳ ಸಂಖ್ಯೆಗಿಂತ ಹೆಚ್ಚು ಅರ್ಜಿಗಳು ಬಂದಲ್ಲಿ ಮಾತ್ರ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುವುದು. ಇಲ್ಲದಿದ್ದಲ್ಲಿ ಮೆರಿಟ್ ಮತ್ತು ರೋಸ್ಟರ್ ಪದ್ದತಿ ಅನುಸಾರ ದಾಖಲಾತಿ ಮಾಡಲಾಗುವುದು. ಪ್ರವೇಶ ಪರೀಕ್ಷೆಯು 100 ಅಂಕಗಳ ಬಹು ಆಯ್ಕೆ ಮಾದರಿಯಲ್ಲಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಶಿವಮೊಗ್ಗ 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ ದೊರವಾಣಿ 08182 220206 ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read