BIG NEWS : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೇ 20ಕ್ಕೆ 2 ವರ್ಷ : , ವಿಜಯನಗರದಲ್ಲಿ ಬೃಹತ್ ಸಮಾವೇಶ ಆಯೋಜನೆ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೇ 20ಕ್ಕೆ ಎರಡು ವರ್ಷ ತುಂಬಲಿದೆ. ಹಾಗಾಗಿ, ವಿಜಯ ನಗರದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೇ 20ಕ್ಕೆ ಎರಡು ವರ್ಷ ತುಂಬಲಿದೆ. ಹಾಗಾಗಿ, ವಿಜಯ ನಗರದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗುತ್ತಿದೆ. ಯುದ್ಧ ನಡೆಯುತ್ತಿರುವ ಕಾರಣ ಕಾರ್ಯಕ್ರಮ ಆಯೋಜಿಸುವ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಈ ಸಮಾವೇಶದಲ್ಲಿ 1 ಲಕ್ಷ ಗೊಲ್ಲರ ತಾಂಡಾದವರನ್ನು ಒಂದು ಕಡೆ ಸೇರಿಸಿ, ಪಟ್ಟ ವಿತರಣೆ ಮಾಡುವ ಕೆಲಸ ಮಾಡಲಾಗುವುದು ಎಂದರು.

ಮಹಾತ್ಮಾ ಗಾಂಧೀಜಿಯವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಶತಮಾನೋತ್ಸವ ಸ್ಮರಣಾರ್ಥ ರಾಜ್ಯದಲ್ಲಿ 100 ಕಾಂಗ್ರೆಸ್ ಭವನಗಳನ್ನು ನಿರ್ಮಿಸಲಾಗುತ್ತಿದೆ.ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಿ, ಆನ್ಲೈನ್ ಮೂಲಕ 100 ಸ್ಥಳಗಳಲ್ಲಿ ನಿರ್ಮಾಣವಾಗಲಿರುವ ಕಾಂಗ್ರೆಸ್ ಭವನಗಳಿಗೆ ಅಡಿಗಲ್ಲು ಹಾಕಲಾಗುವುದು.ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವರಿಷ್ಠರಾದ @RahulGandhiಅವರನ್ನು ಆಹ್ವಾನಿಸಲಾಗುವುದು. ಈ ವೇಳೆ, ರಾಹುಲ್ ಗಾಂಧಿ ಅವರು ಕಾರ್ಯಕರ್ತರ ಜತೆಗೂ ಚರ್ಚೆ ನಡೆಸಲಿದ್ದಾರೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read