HomeKarnatakaBREAKING: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆ ಶೀಘ್ರ: ಎಂ.ಬಿ. ಪಾಟೀಲ್

BREAKING: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆ ಶೀಘ್ರ: ಎಂ.ಬಿ. ಪಾಟೀಲ್

ಬೆಂಗಳೂರು: ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಹೆಚ್ಚು ಸಮಯ ಇಲ್ಲ, ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆ ಹಾಗೂ ಮತಕ್ಷೇತ್ರಗಳಲ್ಲಿ ಜವಾಬ್ದಾರಿ ವಹಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದ್ದು, ಜಿಲ್ಲಾ ಕಮಿಟಿ ರಚನೆ, ಮತಕ್ಷೇತ್ರದಲ್ಲಿ ಸಂಯೋಜಕರ ನೇಮಕ, ಪ್ರಚಾರ ವೈಖರಿ ಹೇಗಿರಬೇಕು ಎಂಬುದರ ಕುರಿತು ಚರ್ಚಿಸಲಾಗಿದೆ. ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸಬೇಕಿದೆ. ಕಾಂಗ್ರೆಸ್ ಅವಧಿಯ ಯೋಜನೆಗಳ ಪ್ರಚಾರ ಮಾಡುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular