 ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Former CM Basavaraj Bommai) ಯವರನ್ನು ಮುಗಿಸಲು ಅವರ ವಿರುದ್ಧ ಬಸನಗೌಡ ಪಾಟೀಲ್ (Basanagouda Patil) ಅವರನ್ನು ಎತ್ತಿ ಕಟ್ಟುತ್ತಿದ್ದಾರೆ ಎಂಬ ಸಚಿವ ಎಂ.ಬಿ.ಪಾಟೀಲ್ (Minister M.B. Patil) ಹೇಳಿಕೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Former CM Basavaraj Bommai) ಯವರನ್ನು ಮುಗಿಸಲು ಅವರ ವಿರುದ್ಧ ಬಸನಗೌಡ ಪಾಟೀಲ್ (Basanagouda Patil) ಅವರನ್ನು ಎತ್ತಿ ಕಟ್ಟುತ್ತಿದ್ದಾರೆ ಎಂಬ ಸಚಿವ ಎಂ.ಬಿ.ಪಾಟೀಲ್ (Minister M.B. Patil) ಹೇಳಿಕೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಯತ್ನಾಳ್, ಎಂ.ಬಿ.ಪಾಟೀಲ್ ಅವರೇ ನಿಮ್ಮ ಬಗ್ಗೆ ನನಗೆ ಅಯ್ಯೋ ಅನ್ನಿಸುತ್ತಿದೆ. ನಿಮ್ಮಲ್ಲಿ ಇರುವ ರೀತಿ ಎಲ್ಲಾ ಪಕ್ಷದಲ್ಲಿರುತ್ತದೆ ಎಂದು ಭಾವಿಸಬೇಡಿ, ದಲಿತ ನಾಯಕರಾದ ಶ್ರೀ ಡಾ. ಜಿ ಪರಮೇಶ್ವರ್ ಅವರನ್ನು ಮುಗಿಸಲು ಸಿದ್ದರಾಮಯ್ಯನವರು ಯಾರ ಹೆಗಲ ಮೇಲೆ ಇಟ್ಟು ಗುಂಡು ಹೊಡೆದರು?
 ನಿಮಗೆ “ಭಾರಿ ಸಂಪನ್ಮೂಲ” ಜಲಸಂಪನ್ಮೂಲ ಇಲಾಖೆ ಸಿಗಲಿಲ್ಲ ಅನ್ನುವ ಕಾರಣಕ್ಕೆ ಡಿ.ಕೆ ಶಿವಕುಮಾರ್ ಅವರ ವಿರುದ್ಧ ನಿಮ್ಮ ಹೆಗಲ ಮೇಲೆ ಬಂದೂಕು ಇಟ್ಟಿರುವುದು ಯಾರು? ಹಾ! ಮೊನ್ನೆ ನಿಮ್ಮ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಡಿಕೆಶಿಯವರು ನಿಮಗೆ ಅಲ್ವಾ ,”Dont Disturb” ಅಂದಿದ್ದು, ನಿಮ್ಮಂತಹ ಹಿರಿಯ ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಪಕ್ಷ ಹೀಗೆ ನಡೆಸಿಕೊಳ್ಳಬಾರದಿತ್ತು ಬಿಡಿ ಎಂದು ತಿರುಗೇಟು ನೀಡಿದ್ದಾರೆ.
ಸಚಿವ ಎಂ.ಬಿ.ಪಾಟೀಲ್ ಅವರು, ಬಿ.ಎಸ್. ಸಂತೋಷ್ ಅವರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ ಲಿಂಗಾಯತ ನಾಯಕರನ್ನು ಮುಗಿಸಿದ್ದೀರಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ.
ಇದೀಗ ಉಳಿದಿರುವ, ಏಕೈಕ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಯವರನ್ನು ಮುಗಿಸಲು ಅವರ ವಿರುದ್ಧ ಬಸನಗೌಡ ಪಾಟೀಲ್ ಅವರನ್ನು ಎತ್ತಿ ಕಟ್ಟಿ, ಜೊತೆಗೆ ನಿಮ್ಮ ಪಟ್ಟಾ ಶಿಷ್ಯ ಪ್ರತಾಪ್ ಸಿಂಹ ಅವರ ಹೆಗಲ ಮೇಲೆ ಬಂದೂಕು ಇಟ್ಟು ಗುರಿನೆಟ್ಟಿರುವುದನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಕರ್ನಾಟಕದ ಇತ್ತೀಚಿನ ರಾಜಕಾರಣವನ್ನು ಒಂದೇ ವಾಕ್ಯದಲ್ಲಿ ಹೇಳುವುದಾದರೆ, ವಿಶ್ವೇಶ್ವರ ಭಟ್ ರವರು ಹೇಳಿರುವ “ಅತಿಯಾದ ‘ಸಂತೋಷ’ವೇ ದುಃಖಕ್ಕೆ ಕಾರಣ” …ಲಿಂಗಾಯತರ ನಂತರ ನಿಮ್ಮ ಗುರಿ ಒಕ್ಕಲಿಗರಾ, ದಲಿತರಾ…? ಎಂದು ಟ್ವೀಟ್ ಮಾಡಿದ್ದರು.
https://twitter.com/BasanagoudaBJP/status/1669956353115430912?cxt=HHwWgIDRnZKd8KwuAAAA

 
		 
		 
		 
		 Loading ...
 Loading ... 
		 
		 
		