HomeLive Newsಲೇಡಿಸ್ ಹಾಸ್ಟೆಲ್ ಟೆರೇಸ್ ನಿಂದ ಬಿದ್ದು MBA ವಿದ್ಯಾರ್ಥಿನಿ ಸಾವು

ಲೇಡಿಸ್ ಹಾಸ್ಟೆಲ್ ಟೆರೇಸ್ ನಿಂದ ಬಿದ್ದು MBA ವಿದ್ಯಾರ್ಥಿನಿ ಸಾವು

ಲಖ್ನೌ: ಲೇಡಿಸ್ ಹಾಸ್ಟೆಲ್ ಟೆರೇಸ್ ಮೇಲಿನಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘೋರ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಐಐಎಂಟಿ ವಿಶ್ವವಿದ್ಯಾಲ್ಯದ ಲೇಡಿಸ್ ಹಾಸ್ಟೆಲ್ ಟೆರೇಸ್ ನಿಂದ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿನಿ ಅನು ಗುಪ್ತಾ ಮೃತ ದುರ್ದೈವಿ. ಇಲ್ಲಿನ ಸರೋಜಿನಿ ನಾಯ್ಡು ಬಾಲಕಿಯರ ಹಾಸ್ಟೆಲ್ ನಲ್ಲಿ ವಾಸವಾಗಿದ್ದಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾತ್ರಿ ಈ ಘಟನೆ ನಡೆದಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯನ್ನು ಕಂಡ ಕೆಲಸದವಳು ಇತರ ವಿದ್ಯಾರ್ಥಿಗಳಿಗೆ ಹಾಗೂ ಹಾಸ್ಟೆಲ್ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾಳೆ. ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಬಿದ್ದ ರಭಸಕ್ಕೆ ಅನು ಗುಪ್ತಾ ಅವರ ಮುಖ ಸಂಪೂರ್ಣ ಜಜ್ಜಿ ಹೋಗಿದೆ. ತಲೆಗೆ ಗಂಭೀರವಾಗಿ ಗಾಯಗಳಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ಅನು ಗುಪ್ತಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವರದಿ ಬಂದ ಬಳಿಕವೇ ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ ಎಂಬುದು ತಿಳಿದುಬರಲಿದೆ. ಪ್ರಕರಣದ ತನಿಖೆಗೆ ಎರಡು ತಂಡಗಳನ್ನು ರಚಿಸಲಾಗಿದೆ ಎಂದಿ ಮೀರತ್ ಎಸ್ ಪಿ ಅಭಿಜಿತ್ ಕುಮಾರ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular