ಮಂಡ್ಯ : ಮಂಡ್ಯದ ಮಿಮ್ಸ್ ಹಾಸ್ಟೆಲ್ ನಲ್ಲಿ ಎಂಬಿಬಿಎಸ್ (MBBS) ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊಪ್ಪಳ ಮೂಲದ ಭರತ್ ಯತ್ತಿನಮನೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈತ ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ರಾತ್ರಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

