ಜೈಪುರ: ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ತೃತೀಯ ವರ್ಷದ ಮೆಡಿಕಲ್ ವಿದ್ಯಾರ್ಥಿನಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಾಚಿ ಮೀನಾ (೨೧) ಮೃತ ವಿದ್ಯಾರ್ಥಿನಿ.
ವಿದ್ಯಾರ್ಥಿನಿ ಪ್ರಾಚಿ, ಕೋಟದ ಆಕಾಶವಾಣಿ ಕಾಲೋನಿಯಲ್ಲಿರುವ ತನ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ವಿದ್ಯಾರ್ಥಿನಿ ರಾಜಸ್ಥಾನದ ದೌಸಾ ಮೂಲದವರು. ತಂದೆ ಆಲ್ ಇಂಡಿಯಾ ರೇಡಿಯೋದಲ್ಲಿ ಕೆಲ ನಿರ್ವಹಿಸುತ್ತಿದ್ದರು. ವಿದ್ಯಾರ್ಥಿನಿ ಇದ್ದಕ್ಕಿದ್ದಂತೆ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ.
ನಯಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
