HomeKarnatakaರಾಜ್ಯದ ಎಲ್ಲಾ ವಿವಿಗಳಲ್ಲಿ ಏಕರೂಪ ಪರೀಕ್ಷೆ, ಮೌಲ್ಯಮಾಪನ, ಶುಲ್ಕ ವ್ಯವಸ್ಥೆ ಮುಂದಿನ ವರ್ಷದಿಂದ ಜಾರಿ

ರಾಜ್ಯದ ಎಲ್ಲಾ ವಿವಿಗಳಲ್ಲಿ ಏಕರೂಪ ಪರೀಕ್ಷೆ, ಮೌಲ್ಯಮಾಪನ, ಶುಲ್ಕ ವ್ಯವಸ್ಥೆ ಮುಂದಿನ ವರ್ಷದಿಂದ ಜಾರಿ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ವೇಳಾಪಟ್ಟಿ ಮಾದರಿ ವಿಸ್ತರಣೆ ಮಾಡಲಾಗುವುದು.

ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಯಲ್ಲಿ ಈಗಾಗಲೇ ಏಕರೂಪ ವೇಳಾಪಟ್ಟಿ ಜಾರಿಯಲ್ಲಿದ್ದು, ಈ ಮಾದರಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪರೀಕ್ಷಾ ವೇಳಾಪಟ್ಟಿ, ಮೌಲ್ಯಮಾಪನ ಪದ್ಧತಿ ಮತ್ತು ಪ್ರತಿ ಕೋರ್ಸ್ ಗಳ ಶುಲ್ಕ ನಿಗದಿಗೆ ವಿಸ್ತರಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉನ್ನತ ಶಿಕ್ಷಣ ಇಲಾಖೆ ನೀಡಿದ ವೇಳಾಪಟ್ಟಿಯ ಪ್ರಕಾರವೇ ವಿಶ್ವವಿದ್ಯಾಲಯಗಳು ಪರೀಕ್ಷೆ ನಡೆಸಬೇಕು. ಕೋರ್ಸುಗಳಿಗೆ ಸರ್ಕಾರ ನಿಗದಿ ಪಡಿಸಿದ ಶುಲ್ಕ ಪಡೆದುಕೊಳ್ಳಬೇಕು. ಅಲ್ಲದೆ, ಉನ್ನತ ಶಿಕ್ಷಣ ಇಲಾಖೆ ಸೂಚಿಸುವ ರೀತಿಯಲ್ಲಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡ ಬೋಧಕರ ಅರ್ಹತೆ, ಸಂಭಾವನೆ, ಭತ್ಯೆಗಳನ್ನು ನೀಡಬೇಕು.

ವಿಶ್ವವಿದ್ಯಾಲಯಗಳ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ಸಹಿತ ಏಕರೂಪ ಪರೀಕ್ಷೆ ವೇಳಾಪಟ್ಟಿ, ಶುಲ್ಕ ವ್ಯವಸ್ಥೆ, ಮೌಲ್ಯಮಾಪನ ಪದ್ದತಿ ಜಾರಿಗೊಳಿಸುವ ಕುರಿತಾಗಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ. ವೈ.ಎಸ್. ಸಿದ್ದೇಗೌಡ ನೇತೃತ್ವದ 13 ಸದಸ್ಯರ ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಈ ವರದಿ ಅನುಷ್ಠಾನಕ್ಕೆ ಸಮ್ಮತಿ ಸೂಚಿಸಿದ್ದು, ಕೆಲ ಬದಲಾವಣೆಗಳೊಂದಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular