HomeKarnatakaಬೆಂಗಳೂರಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ತಂದು ಮಾರಾಟ: ಆರೋಪಿ ಅರೆಸ್ಟ್

ಬೆಂಗಳೂರಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ತಂದು ಮಾರಾಟ: ಆರೋಪಿ ಅರೆಸ್ಟ್

ಮಂಗಳೂರು: ಬೆಂಗಳೂರಿನಿಂದ ನಿಷೇಧಿತ ವಸ್ತು ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಬೆಂಗಳೂರಿನಿಂದ ಬೆಂಗಳೂರಿಗೆ ಸಾಗಿಸಿ ಮಾರಾಟ ಮಾಡುತ್ತಿದ್ದ ಬಂಟ್ವಾಳದ ಸಜೀಪಮೂಡು ಗ್ರಾಮದ ಆಸೀಫ್(32) ಎಂಬುವನನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯಿಂದ 1.35 ಲಕ್ಷ ರೂಪಾಯಿ ಮೌಲ್ಯದ 27 ಗ್ರಾಂ ಎಂಡಿಎಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಯಂತ್ರ ಸೇರಿದಂತೆ 1.45 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿ ವಿರುದ್ಧ ಈ ಹಿಂದೆ ಸುರತ್ಕಲ್, ವಿಟ್ಲ, ಬಂಟ್ವಾಳ ನಗರ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣ ದಾಖಲಾಗಿವೆ.

ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ನೇತೃತ್ವದಲ್ಲಿ ಪಿಎಸ್ಐ ಶರಣಪ್ಪ ಭಂಡಾರಿ, ಎಸ್ಐ ಸುಜನ್ ಶೆಟ್ಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿ ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular