HomeKarnatakaಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿಯೂಟ, ಕ್ಷೀರ ಭಾಗ್ಯ ಯೋಜನೆಗೆ ಸಿದ್ಧತೆ ಕೈಗೊಳ್ಳಲು ಸೂಚನೆ

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿಯೂಟ, ಕ್ಷೀರ ಭಾಗ್ಯ ಯೋಜನೆಗೆ ಸಿದ್ಧತೆ ಕೈಗೊಳ್ಳಲು ಸೂಚನೆ

ಬೆಂಗಳೂರು: 2023 -24 ನೇ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಧ್ಯಾಹ್ನದ ಬಿಸಿಯೂಟ ಮತ್ತು ಕ್ಷೀರ ಭಾಗ್ಯ ಯೋಜನೆ ಅನುಷ್ಠಾನಕ್ಕೆ ಅಗತ್ಯ ಪೂರ್ವಭಾವಿ ಸಿದ್ಧತೆ ಕೈಗೊಳ್ಳಲು ಶಿಕ್ಷಣ ಇಲಾಖೆ ವತಿಯಿಂದ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ರಜೆ ಅವಧಿಯಲ್ಲಿ ಉಳಿಕೆಯಾದ ಅಕ್ಕಿ, ಗೋಧಿ, ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ ಮತ್ತು ಹಾಲಿನ ಪುಡಿ ಸೇರಿದಂತೆ ಇತರೆ ಪದಾರ್ಥಗಳನ್ನು ಪರಿಶೀಲಿಸಿ ದಾಖಲಿಸಬೇಕು. ಅವಧಿ ಮುಗಿದ ಪದಾರ್ಥಗಳಿದ್ದರೆ ಅವುಗಳನ್ನು ಬಿಸಿಯೂಟಕ್ಕೆ ಬಳಕೆ ಮಾಡಬಾರದು ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳಪೆಯಾದ, ಹುಳ ತಿಂದ ಹಾಗೂ ಗುಣಮಟ್ಟ ಹಾಳಾದ, ಕೊಳೆತ ಆಹಾರ ಪದಾರ್ಥಗಳನ್ನು ಬೇರ್ಪಡಿಸಿ ಹೊರಹಾಕುವಂತೆ ಶಿಕ್ಷಣ ಇಲಾಖೆ ಆಯುಕ್ತ ಡಾ.ಆರ್.  ವಿಶಾಲ್ ಸುತ್ತೋಲೆ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular