Indira Canteen : ‘ಇಂದಿರಾ ಕ್ಯಾಂಟೀನ್’ ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು : ಇಂದಿರಾ ಕ್ಯಾಂಟೀನ್ ನಲ್ಲೂ ಮಾಂಸ ಸೇವನೆಗೂ ಅವಕಾಶವಿದೆ  ಎಂದು ಸಚಿವ ಹೆಚ್.ಸಿ ಮಹದೇವಪ್ಪ ( H.C Mahadevappa) ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸಚಿವರು ‘ಇಂದಿರಾ ಕ್ಯಾಂಟೀನ್ ನಲ್ಲೂ ಮಾಂಸ ಸೇವನೆಗೂ ಅವಕಾಶವಿದೆ. ಹೊರಗಡೆಯಿಂದ ಮಾಂಸ ( ಚಿಕನ್, ಕಬಾಬ್, ಸಾಂಬಾರ್ ) ತಂದು ಸೇವನೆ ಮಾಡಬಹುದು. ಆದರೆ ಸರ್ಕಾರದಿಂದ ಮಾಂಸಹಾರಿ ಊಟ ನೀಡುವ ಬಗ್ಗೆ ಚಿಂತನೆ ಇಲ್ಲ. ಸದ್ಯ, ರುಚಿಕರವಾದ ತರಕಾರಿ ಊಟ ನೀಡಲಿದ್ದೇವೆ . ಶೀಘ್ರದಲ್ಲೇ ಇನ್ನಷ್ಟು ಇಂದಿರಾ ಕ್ಯಾಂಟೀನ್ ಆರಂಭಿಸುವ ಪ್ರಸ್ತಾಪ ಇದೆ’ ಎಂದರು.

ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ

ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯವಾಗಿದೆ ಎಂದು ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸಚಿವರು ಎಲ್ಲ ಧರ್ಮಗಳು ಆಚಾರ,ವಿಚಾರಕ್ಕೆ ಅವಕಾಶವಿದೆ. ವಿದ್ಯಾರ್ಥಿಗಳಾಗಿದ್ದಾಗಿನಿಂದ ನೈತಿಕ ಜವಾಬ್ದಾರಿಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಲಿ ಎಂಬ ಕಾರಣಕ್ಕೆ ಪ್ರತಿ ಶಾಲೆಗಳಲ್ಲೂ ಸಂವಿಧಾನ ಓದಬೇಕು. ಇನ್ನುಮುಂದೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯವಾಗಿದೆ ಎಂದು ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ.

ಮುಂದುವರೆದು ಮಾತನಾಡಿದ ಸಚಿವರು ಜನರಿಗೆ ಹೆಚ್ಚು ಸಮಯ ಕೊಡದ ಕಾರಣ ಕಳೆದ ಬಾರಿ ಚುನಾವಣೆಯಲ್ಲಿ ಸೋಲು ಕಂಡಿದ್ದೆ. ಮೂರು ಬಾರಿ ನನ್ನಿಂದ ನಾನೇ ಸೋತಿದ್ದೇನೆ. ಗೆದ್ದಾಗ ಮಂತ್ರಿಯಾಗುತ್ತಿದ್ದೆ. ಜನರಿಗೆ ಹೆಚ್ಚು ಸಮಯ ಕೊಡುತ್ತಿರಲಿಲ್ಲ. ಕಾರ್ಯಕರ್ತರಿಂದ ದೂರವಾಗಿದ್ದ ಕಾರಣ ಸೋಲಾಗಿತ್ತು. ಸೋತಾಗ ಕುಗ್ಗಿಲ್ಲ, ಗೆದ್ದಾಗ ಬೀಗಿಲ್ಲ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read