ವೈದ್ಯಕೀಯ, ಆಯುಷ್ ಕೋರ್ಸ್ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ: ನರ್ಸಿಂಗ್ ಕೋರ್ಸ್ ಗೆ ಅರ್ಜಿ

ಬೆಂಗಳೂರು: UGNEET-25ರ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತು ಹಾಗೂ ಆಯುಷ್ ಕೋರ್ಸ್ ಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಆಕ್ಷೇಪಣೆಗಳು ಇದ್ದಲ್ಲಿ ಸೆ.21ರಂದು ಸಂಜೆ 5 ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ಸಲ್ಲಿಸಬಹುದು.

PB.BSc, #Nursing/BPT Lateral Entry/ #B.Sc-AHS (Lateral Entry) ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಬಿಟ್ಟಿರುವ ಲಿಂಕ್ ಮೂಲಕ ಸೆ.29ರೊಳಗೆ ಅರ್ಜಿ ಸಲ್ಲಿಸಬೇಕು. ಶುಲ್ಕ ಪಾವತಿಗೆ ಸೆ.30 ಕೊನೆ ದಿನ. ವಿವರಗಳಿಗೆ ಮಾಹಿತಿ ಬುಲೆಟಿನ್ ಓದಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read