ಚಿಕ್ಕಮಗಳೂರು: ಅಶ್ಲೀಲ ಮೆಸೇಜ್ ಕಳುಹಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಮೆಡಿಕಲ್ ಕಾಲೇಜು ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿನಿ ದೂರು ನೀಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರಿನ ಮೆಡಿಕಲ್ ಕಾಲೇಜು ಪ್ರೊಫೆಸರ್ ಡಾ.ಗಂಗಾಧರ್ ವಿರುದ್ಧ ವಿದ್ಯಾರ್ಥಿನಿ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಬೆಂಗಳೂರು ಮೂಲದ ಮೆಡಿಕಲ್ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದು, ಪ್ರೊಫೆಸರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈಗಾಗಲೇ ವಿದ್ಯಾರ್ಥಿನಿ ಕಾಲೇಜು ಡೀನ್ ಗೆ ದೂರು ನೀಡಿದ್ದರು. ಡಾ.ಗಂಗಾಧರ್ ಗೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಇದೀಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 2023ರಿಂದ ಡಾ.ಗಂಗಾಧರ್ ವಿದ್ಯಾರ್ಥಿನಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದನಂತೆ. ಪ್ರಕರಣ ಮುಚ್ಚಿಹಾಕುವ ಯತ್ನ ಕೂಡ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
