HomeLatest Newsವೈದ್ಯಕೀಯ ಕೋರ್ಸ್ ಅಭ್ಯರ್ಥಿಗಳೇ ಗಮನಿಸಿ: ಇಂದು ಸ್ಟ್ರೇ ವೇಕೆನ್ಸಿ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ವೈದ್ಯಕೀಯ ಕೋರ್ಸ್ ಅಭ್ಯರ್ಥಿಗಳೇ ಗಮನಿಸಿ: ಇಂದು ಸ್ಟ್ರೇ ವೇಕೆನ್ಸಿ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.

ಆಕ್ಷೇಪಣೆಗಳು ಇದ್ದಲ್ಲಿ ಡಿ.16ರಂದು ಬೆಳಿಗ್ಗೆ 10ಗಂಟೆಯೊಳಗೆ ಪ್ರಾಧಿಕಾರಕ್ಕೆ ಇ-ಮೇಲ್ ([email protected]) ಮೂಲಕ ತಿಳಿಸಬೇಕು.

ಬಳಿಕ ಡಿ.16ರಂದು ಬೆಳಿಗ್ಗೆ 11 ಗಂಟೆ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಡಿ.17ರಂದು ಸಂಜೆ 4 ಗಂಟೆಯೊಳಗೆ ಶುಲ್ಕ ಪಾವತಿಸಿ (ವೈದ್ಯಕೀಯ ಶುಲ್ಕ ಠೇವಣಿ ಕಡಿತ ಮಾಡಿಕೊಂಡು), ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಬಳಿಕ ಸಂಜೆ 6 ಗಂಟೆ ಒಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular