HomeKarnatakaBIG NEWS: ಪಿಜಿ ವೈದ್ಯಕೀಯ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

BIG NEWS: ಪಿಜಿ ವೈದ್ಯಕೀಯ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ಸ್ನಾತಕೋತರ ವೈದ್ಯಕೀಯ -2024 ಕೋರ್ಸ್ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಶುಕ್ರವಾರ ಪ್ರಕಟಿಸಿದೆ.

ಒಟ್ಟು 2702 ಸೀಟುಗಳನ್ನು ಹಂಚಿಕೆ ಮಾಡಲಾಗಿದ್ದು, ಡಿಸೆಂಬರ್ 26 ರೊಳಗೆ ಶುಲ್ಕ ಪಾವತಿಸಿ ಡಿಸೆಂಬರ್ 27 ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು. ಸಿಕ್ಕಿರುವ ಸೀಟು ಇಷ್ಟವಿಲ್ಲದಿದ್ದಲ್ಲಿ 1.50 ಲಕ್ಷ ರೂ. ದಂಡ ಕಟ್ಟಿ ಮೂಲ ದಾಖಲೆಗಳನ್ನು ವಾಪಸ್ ಪಡೆಯಬಹುದು. ಒಟ್ಟು 4651 ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಸ್ವೀಕರಿಸಿದ್ದು, ಎಲ್ಲರನ್ನೂ ಸೀಟು ಹಂಚಿಕೆಗೆ ಪರಿಗಣಿಸಲಾಗಿದೆ. ಮೂಲ ದಾಖಲೆ ಸಲ್ಲಿಸದವರನ್ನು ಪರಿಗಣಿಸಲಾಗಿಲ್ಲ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular