HomeKarnatakaಸಿಗದ ಮೆಡಿಕಲ್ ಸೀಟು: ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ

ಸಿಗದ ಮೆಡಿಕಲ್ ಸೀಟು: ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ: ಮೆಡಿಕಲ್ ಸೀಟು ಸಿಗದ ಕಾರಣಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮ ಶ್ವೇತಾ ಅಪ್ಪಾಸಾಬ್ ಗುಣಾರಿ(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನೀಟ್ ಪರೀಕ್ಷೆ ಬರೆದಿದ್ದ ಅವರು ಮೆಡಿಕಲ್ ಸೀಟು ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ವೈದ್ಯಕೀಯ ಕೋರ್ಸ್ ಸೇರಲು ಸೀಟು ಸಿಗದ ಕಾರಣ ಭಾನುವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular