HomeLatest Newsದೇಶವನ್ನೇ ಬೆಚ್ಚಿಬೀಳಿಸಿದ್ದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ: ಸಂತ್ರಸ್ತೆ ತಾಯಿಗೆ ಬಿಜೆಪಿ ಟಿಕೆಟ್

ದೇಶವನ್ನೇ ಬೆಚ್ಚಿಬೀಳಿಸಿದ್ದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ: ಸಂತ್ರಸ್ತೆ ತಾಯಿಗೆ ಬಿಜೆಪಿ ಟಿಕೆಟ್

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರುವ ಸಂಕಲ್ಪದೊಂದಿಗೆ ಬಿಜೆಪಿ ಕಾರ್ಯತಂತ್ರ ರೂಪಿಸಿದೆ.

ಬುಧವಾರ 19 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಲಾಗಿದೆ. ಆರ್.ಜಿ. ಕರ್ ಕಾಲೇಜು, ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿ ರತ್ನಾ ದೇವನಾಥ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ಪಾಣಿಹಾಟಿ ವಿಧಾನಸಭಾ ಕ್ಷೇತ್ರದಿಂದ ರತ್ನಾ ದೇವನಾಥ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಉತ್ತರ 24 ಪರಗಣ ಜಿಲ್ಲೆಯ ಪಾಣಿಹಾಟಿ ಕ್ಷೇತ್ರ ಹೈಪ್ರೊಫೈಲ್ ಸ್ಪರ್ಧೆಗೆ ಸಾಕ್ಷಿಯಾಗುವ ಸಾಧ್ಯತೆ ಇದೆ. ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪಶ್ಚಿಮ ಬಂಗಾಳ ಸೇರಿದಂತೆ ದೇಶದೆಲ್ಲೆಡೆ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ ಆರ್.ಜಿ. ಕರ್ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮಹಿಳೆಯರ ಸುರಕ್ಷತೆ ಕಾನೂನು ಸುವ್ಯವಸ್ಥೆ ಬಗ್ಗೆ ಸಾಕಷ್ಟು ಪ್ರಶ್ನೆ ಹುಟ್ಟು ಹಾಕಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular