HomeLatest NewsBIG NEWS: ಸಿಂಗರಾಜಿಪುರ ಕೆರೆಯಲ್ಲಿ ಶವವಾಗಿ ಪತ್ತೆಯಾದ ಮೆಡಿಕಲ್ ವಿದ್ಯಾರ್ಥಿನಿ!

BIG NEWS: ಸಿಂಗರಾಜಿಪುರ ಕೆರೆಯಲ್ಲಿ ಶವವಾಗಿ ಪತ್ತೆಯಾದ ಮೆಡಿಕಲ್ ವಿದ್ಯಾರ್ಥಿನಿ!

ರಾಮನಗರ: ರಾಮನಗರ ಜಿಲ್ಲೆಯ ಸಿಂಗರಾಜಿಪುರ ಕೆರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಮಹಾಲಕ್ಷ್ಮೀ (20) ಮೃತ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿ ಗ್ರಾಮದ ಮಹಾಲಕ್ಷ್ಮೀ ರಾಮನಗರದ ಇನ್ಸ್ ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಇಂದು ಸಿಂಗರಾಜಿಪುರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆರೆಯ ದಡದಲ್ಲಿ ವಿದ್ಯಾರ್ಥಿನಿಯ ಐಡಿ ಕಾರ್ಡ್, ಬ್ಯಾಗ್ ಪತ್ತೆಯಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಅನುಮಾನಗೊಂಡು ಕೆರೆಯಲ್ಲಿ ಹುಡುಕಾಟ ನಡೆಸಿದಾಗ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular