HomeLatest Newsಬಾಯ್ ಫ್ರೆಂಡ್ ಕಿರುಕುಳ: ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಬಾಯ್ ಫ್ರೆಂಡ್ ಕಿರುಕುಳ: ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಮುಂಬೈ: ಬಾಯ್ ಫ್ರೆಂಡ್ ಕಿರುಕುಳಕ್ಕೆ ಬೇಸತ್ತು 24 ವರ್ಷದ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಸ್ತುತಿ ಸೋನಾವಾನೆ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಸಾವಿಗೂ ಮುನ್ನ ಆರು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾಳೆ. ಪತ್ರದಲ್ಲಿ ತನ್ನ ಗೆಳೆಯ ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾಳೆ. ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.

ಸ್ತುತಿ ಮಾಸ್ಟರ್ ಆಫ್ ಡೆಂಟಲ್ ಸರ್ಜರಿ ವಿದ್ಯಾರ್ಥಿನಿ. ಆಂಟೋಪ್ ಹಿಲ್​​ನಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ವಿಮಾ ಏಜೆಂಟ್ ಆಗಿರುವ ಫಜಲ್ ಮೊಹಮ್ಮದ್ ಖಾನ್ ಹೆಸರು ಕೇಳಿಬಂದಿದ್ದು, ಆತನನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಬೈನ ಆಂಟೋಪ್ ಹಿಲ್ ನಲ್ಲಿ ಸ್ತುತಿ ತನ್ನ ಪೋಷಕರು ಮತ್ತು ಸಹೋದರಿಯೊಂದಿಗೆ ವಾಸವಾಗಿದ್ದಳು. ನಿನ್ನೆಯಿಂದ ತನ್ನ ಕೋಣೆಯಿಂದ ಹೊರಬರದಿದ್ದಾಗ, ಅವಳ ಪೋಷಕರು ಅವಳಿಗೆ ಕರೆ ಮಾಡಿದ್ದಾರೆ, ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಅವರು ಅವಳ ಕೋಣೆಯ ಬಾಗಿಲು ಒಡೆದು ನೋಡಿದಾಗ, ಆಕೆ ಸೀಲಿಂಗ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ.

ಅವಳನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವಳು ಸಾಅವನ್ನಪ್ಪಿರುವುದಾಗಿ ಘೋಷಿಸಿದ್ದಾರೆ. ಯುವತಿ ತನ್ನ ಕೋಣೆಯಲ್ಲಿ ಆರು ಪುಟಗಳ ‘ಆತ್ಮಹತ್ಯೆ ಪತ್ರ’ವನ್ನು ಬರೆದಿಟ್ಟಿದ್ದಾಳೆ. ಅದರಲ್ಲಿ ಫಜ್ಲ್ ಮೊಹಮ್ಮದ್ ಖಾನ್ ಹೆಸರನ್ನು ಉಲ್ಲೇಖಿಸಿದ್ದಾಳೆ. ಅವನು ನಿರಂತರವಾಗಿ ತನಗೆ ಕಿರುಕುಳ ನೀಡುತ್ತಿದ್ದ ಎಂದು ಬರೆದಿದ್ದಾಳೆ ಎಂದು ಆಂಟೋಪ್ ಹಿಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯುವತಿ ಪೋಷಕರು ನೀಡಿರುವ ದೂರಿನ ಮೇಲೆ ಆರೋಪಿಯನ್ನು ಭಾರತೀಯ ದಂಡ ಸಂಹಿತೆ ಸೆಕ್ಷನ್ 108 ಸೇರಿದಂತೆ ಸಂಬಂಧಿತ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಸಮಯದಲ್ಲಿ ಮೃತ ಯುವತಿ ಹಾಗೂ ಆರೋಪಿ ಡೇಟಿಂಗ್ ಆ್ಯಪ್ ಮೂಲಕ ಪರಿಷಯವಾಗಿದ್ದರು, ಕಳೆದ ಒಂದು ವರ್ಷದಿಂದ ಸಂಬಂಧದಲ್ಲಿದ್ದರು ಎಂಬುದು ತಿಳಿದುಬಂದಿದೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669


For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular