ಅಂಗನವಾಡಿ ಕೇಂದ್ರಗಳಿಗೆ ಔಷಧ ಕಿಟ್: ಕಾರ್ಯಕರ್ತೆಯರು, ಸಹಾಯಕಿಯರಿಗೆ ತಲಾ 2 ಸೀರೆ ವಿತರಣೆ: ಮೈಸೂರು, ಕಲಬುರಗಿಯಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ನಿರ್ಮಾಣ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಲಾ 2 ಸೀರೆಗಳಂತೆ ಒಟ್ಟು 2,79,688 ಸೀರೆಗಳನ್ನು ರೂ.13.98 ಕೋಟಿ ವೆಚ್ಚದಲ್ಲಿ ಖರೀದಿಸಿ ವಿತರಿಸಲು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ರಾಜ್ಯದ 69,922 ಅಂಗನವಾಡಿ ಕೇಂದ್ರಗಳಿಗೆ ರೂ.10.49 ಕೋಟಿ ವೆಚ್ಚದಲ್ಲಿ ಔಷಧ ಕಿಟ್‌ಗಳನ್ನು ಖರೀದಿಸಿ ಒದಗಿಸಲು ತೀರ್ಮಾನ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಲಾ 2 ಸೀರೆಗಳಂತೆ ಒಟ್ಟು 2,79,688 ಸೀರೆಗಳನ್ನು ರೂ.13.98 ಕೋಟಿ ವೆಚ್ಚದಲ್ಲಿ ಖರೀದಿಸಿ ವಿತರಿಸಲು ನಿರ್ಧಾರ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದ 75 ಎಕರೆ ಜಮೀನಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಮತ್ತು ಕ್ರೀಡಾ ಸಂಕೀರ್ಣವನ್ನು ರೂ. 2,350 ಕೋಟಿ ವೆಚ್ಚದಲ್ಲಿ ನಿರ್ಮಿಸಲು ತಾತ್ವಿಕ ಅನುಮೋದನೆ.

ವಿಜಯಪುರ ಜಿಲ್ಲಾಸ್ಪತ್ರೆಯ ಆವರಣದಲ್ಲಿ 100 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ವೈದ್ಯಕೀಯ ಉಪಕರಣಗಳನ್ನು ರೂ.54.92 ಕೋಟಿ ಅಂದಾಜು ಮೊತ್ತದಲ್ಲಿ ಖರೀದಿಸಲು ತೀರ್ಮಾನ.

ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ನಿಮ್ಹಾನ್ಸ್‌ ಮಾದರಿಯ ಸಂಸ್ಥೆಗಳನ್ನು ತಲಾ ರೂ.100 ಕೋಟಿಗಳ ಅನುದಾನದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.

ಸಂಜಯ್ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸೆ ಸಂಸ್ಥೆಗೆ ಅವಶ್ಯವಿರುವ ವೈದ್ಯಕೀಯ ಉಪಕರಣಗಳನ್ನು ರೂ.26.09 ಕೋಟಿ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ.

ವೃಷಭಾವತಿ ವ್ಯಾಲಿ ಸಂಸ್ಕರಣಾ ಘಟಕದ ಮರುಬಳಕೆ ನೀರನ್ನು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಕೆರೆಗಳಿಗೆ ತುಂಬಿಸುವ ರೂ.650 ಕೋಟಿ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read