HomeLatest Newsಮೀರತ್‌ನಲ್ಲಿ ಬಿಬಿಎ ವಿದ್ಯಾರ್ಥಿನಿಯರ ರಣಾಂಗಣ: ಬಾಯ್‌ಫ್ರೆಂಡ್ ವಿಚಾರಕ್ಕೆ ನಡುರಸ್ತೆಯಲ್ಲೇ ಸಹಪಾಠಿಗೆ ಬೆಲ್ಟ್ ಏಟು!

ಮೀರತ್‌ನಲ್ಲಿ ಬಿಬಿಎ ವಿದ್ಯಾರ್ಥಿನಿಯರ ರಣಾಂಗಣ: ಬಾಯ್‌ಫ್ರೆಂಡ್ ವಿಚಾರಕ್ಕೆ ನಡುರಸ್ತೆಯಲ್ಲೇ ಸಹಪಾಠಿಗೆ ಬೆಲ್ಟ್ ಏಟು!

ಉತ್ತರ ಪ್ರದೇಶದ ಮೀರತ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯರ ನಡುವೆ ನಡೆದ ಭೀಕರ ಬೀದಿ ಕಾಳಗದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ತನ್ನ ಗೆಳೆಯನ (Boyfriend) ಬಗ್ಗೆ ಸಹಪಾಠಿಯೊಬ್ಬಳು ಕಮೆಂಟ್ ಮಾಡಿದ್ದಕ್ಕೆ ಕೆರಳಿದ ಯುವತಿ, ಆಕೆಯನ್ನು ಬೆಲ್ಟ್‌ನಿಂದ ಅಟ್ಟಾಡಿಸಿ ಹೊಡೆದಿದ್ದಾಳೆ.

ಮೀರತ್‌ನ ಪರ್ತಾಪುರ ಬೈಪಾಸ್‌ನಲ್ಲಿರುವ ದಿವಾನ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್‌ನಲ್ಲಿ ಬಿಬಿಎ (BBA) ಪರೀಕ್ಷೆ ಮುಗಿಸಿ ವಿದ್ಯಾರ್ಥಿಗಳು ಹೊರಬರುತ್ತಿದ್ದರು. ಈ ವೇಳೆ ಕಾಲೇಜು ಕ್ಯಾಂಪಸ್‌ನಿಂದ ಹೊರಬರುತ್ತಿದ್ದ ಯುವಕನೊಬ್ಬನ ಬಗ್ಗೆ ಮತ್ತೊಬ್ಬ ವಿದ್ಯಾರ್ಥಿನಿ ಏನೋ ಕಮೆಂಟ್ ಮಾಡಿದ್ದಾಳೆ ಎನ್ನಲಾಗಿದೆ. ಆ ಯುವಕನ ಜೊತೆಯಲ್ಲಿದ್ದ ಆತನ ಗೆಳತಿಗೆ ಇದು ತೀವ್ರ ಕೋಪ ತರಿಸಿದೆ. ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ಹೋಗಿದೆ.

ಬೆಲ್ಟ್‌ನಿಂದ ಅಟ್ಟಾಡಿಸಿ ಹೊಡೆತ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಪಗೊಂಡ ಯುವತಿ ತನ್ನ ಬಳಿಯಿದ್ದ ಬೆಲ್ಟ್ ತೆಗೆದು ಕಾಲೇಜಿನ ಮುಖ್ಯ ದ್ವಾರದ ಬಳಿಯೇ ಸಹಪಾಠಿಯ ಮೇಲೆ ದಾಳಿ ಮಾಡಿದ್ದಾಳೆ. ಹಲ್ಲೆಗೊಳಗಾದ ವಿದ್ಯಾರ್ಥಿನಿ ತನ್ನನ್ನು ರಕ್ಷಿಸಿಕೊಳ್ಳಲು ಅಲ್ಲಿಂದ ಓಡಲು ಪ್ರಯತ್ನಿಸಿದರೂ, ಆಕ್ರಮಣಕಾರಿ ಯುವತಿ ಆಕೆಯನ್ನು ಬೆನ್ನಟ್ಟಿ ಬೆಲ್ಟ್‌ನಿಂದ ಸಾರ್ವಜನಿಕವಾಗಿ ಥಳಿಸಿದ್ದಾಳೆ. ಸುತ್ತಲೂ ನೂರಾರು ವಿದ್ಯಾರ್ಥಿಗಳು ಮತ್ತು ಕಾಲೇಜಿನ ಭದ್ರತಾ ಸಿಬ್ಬಂದಿ ಇದ್ದರೂ ಯಾರೂ ಜಗಳ ಬಿಡಿಸಲು ಮುಂದಾಗದಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಮೂಕಪ್ರೇಕ್ಷಕರಾದ ವಿದ್ಯಾರ್ಥಿಗಳು

ಘಟನೆ ನಡೆಯುವಾಗ ಅಲ್ಲಿ ನೆರೆದಿದ್ದ ವಿದ್ಯಾರ್ಥಿಗಳು ಜಗಳ ಬಿಡಿಸುವ ಬದಲು ತಮ್ಮ ಮೊಬೈಲ್ ಫೋನ್‌ಗಳಲ್ಲಿ ವಿಡಿಯೋ ಚಿತ್ರೀಕರಿಸುವಲ್ಲಿ ಬ್ಯುಸಿಯಾಗಿದ್ದರು. ಈ ವಿಡಿಯೋ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರ ಗಮನಕ್ಕೆ ಬಂದಿದೆ. ಸದ್ಯ ಪೊಲೀಸರು ಕಾಲೇಜು ಆಡಳಿತ ಮಂಡಳಿಯಿಂದ ಮಾಹಿತಿ ಪಡೆದಿದ್ದು, ವಿಡಿಯೋ ಆಧರಿಸಿ ಇಬ್ಬರು ವಿದ್ಯಾರ್ಥಿನಿಯರನ್ನು ಗುರುತಿಸುವ ಕಾರ್ಯ ನಡೆಸುತ್ತಿದ್ದಾರೆ. ಭದ್ರತಾ ಲೋಪದ ಬಗ್ಗೆಯೂ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular