ಮಣಿಪಾಲ್ ಆಸ್ಪತ್ರೆಯಲ್ಲಿ ಶಾಮನೂರು ಶಿವಶಂಕರಪ್ಪ ಆರೋಗ್ಯ ವಿಚಾರಿಸಿದ ತರಳಬಾಳು ಶ್ರೀ

ಬೆಂಗಳೂರು: ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿಯಾದ ಸಿರಿಗೆರೆ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರ ಶ್ವಾಸಕೋಶದಲ್ಲಿ ಚಿಕ್ಕ ಸಮಸ್ಯೆಯಾಗಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವೈದ್ಯರ ಸಲಹೆಯಂತೆ ವಿಶ್ರಾಂತಿಯಲ್ಲಿದ್ದಾರೆ. ಕಳೆದ 10 ದಿನಗಳಿಂದ ಉತ್ತರ ಭಾರತದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಸ್ವಾಮೀಜಿ ಬೆಂಗಳೂರಿಗೆ ಆಗಮಿಸಿದ ಕೂಡಲೇ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಆಶೀರ್ವದಿಸಿದ್ದಾರೆ.

ಈ ಸಂದರ್ಭದಲ್ಲಿ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ವೀರಶೈವ ಮಹಾಸಭಾ ಅಧ್ಯಕ್ಷ ಶಂಕರಬಿದರಿ ಇದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read