HomeKarnatakaBIG NEWS: ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ದೌರ್ಜನ್ಯ ವಿಚಾರ: ಸೆ. 16 ರಂದು ಮಹತ್ವದ...

BIG NEWS: ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ದೌರ್ಜನ್ಯ ವಿಚಾರ: ಸೆ. 16 ರಂದು ಮಹತ್ವದ ಸಭೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕಲಾವಿದೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಧ್ಯಯನ ನಡೆಸಿ ವರದಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 16ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ ನಡೆಯಲಿದೆ.

ಕಲಾವಿದೆಯರು ಹಾಗೂ ಚಿತ್ರರಂಗದ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಚಿತ್ರರಂಗದಲ್ಲಿ ಕಲಾವಿದೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಧ್ಯಯನಕ್ಕೆ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ರಚಿಸುವಂತೆ ಒತ್ತಾಯಿಸಿ ‘ಫೈರ್’(ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ)ನಿಯೋಗ ಸಿಎಂ ಸಿದ್ಧರಾಮಯ್ಯ ಅವರಿಗೆ ಇತ್ತೀಚೆಗೆ ಮನವಿ ಮಾಡಿತ್ತು.

ಚಿತ್ರರಂಗದ ಎಲ್ಲರನ್ನೂ ಒಟ್ಟುಗೂಡಿಸಿ ಸಭೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ವಾಣಿಜ್ಯ ಮಂಡಳಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ವಾಣಿಜ್ಯ ಮಂಡಳಿಯಲ್ಲಿ ಸೆಪ್ಟೆಂಬರ್ 16ರಂದು ಸಭೆ ನಡೆಸಲಾಗುವುದು. ಚಿತ್ರರಂಗದ ಪ್ರಮುಖರನ್ನು ಆಹ್ವಾನಿಸಿ ಸಭೆಯಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular