ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಒಂದಿದೆ. ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾರ್ಚ್ 23ರಂದು ನಡೆಯಲಿದೆ.
ಮಾರ್ಚ್ 23ರ ಸೋಮವಾರ ಬೆಳಗ್ಗೆ 9.30 ರಿಂದ ಸಂಜೆ 4.30ರ ತನಕ ಉದ್ಯೋಗ ಮೇಳ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜು, ಚಿಕ್ಕಮಗಳೂರು ಇಲ್ಲಿ ನಡೆಯಲಿದೆ. ಆಯ್ಕೆಯಾದವರಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರ ವಿತರಣೆ ಮಾಡಲಾಗುತ್ತದೆ.
50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಲಿದ್ದು, 5000ಕ್ಕೂ ಹೆಚ್ಚು ಉದ್ಯೋಗಾವಕಾಶವಿದೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಲಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಆದ್ಯತೆ ಇರುತ್ತದೆ.
ಈ ಉದ್ಯೋಗ ಮೇಳದಲ್ಲಿ 7ನೇ ತರಗತಿ, 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ನೋಂದಣಿಗೆ ಕೊನೆಯ ದಿನಾಂಕ 15/03/2026.
ಆಸಕ್ತರು ಹೆಚ್ಚಿನ ಮಹಿತಿಗಾಗಿ ಸಂಪರ್ಕಿಸಲು ದೂರವಾಣಿ ಸಂಖ್ಯೆಗಳು 08262-295535, 8147889658, 9380303098.

