HomeIndiaಶಿವಲಿಂಗಕ್ಕೆ ಜಲಾಭಿಷೇಕ ಮಾಡಿದ ಮೆಹಬೂಬಾ ಮುಫ್ತಿ; ರಾಜಕೀಯ ಗಿಮಿಕ್ ಎಂದ ಬಿಜೆಪಿ

ಶಿವಲಿಂಗಕ್ಕೆ ಜಲಾಭಿಷೇಕ ಮಾಡಿದ ಮೆಹಬೂಬಾ ಮುಫ್ತಿ; ರಾಜಕೀಯ ಗಿಮಿಕ್ ಎಂದ ಬಿಜೆಪಿ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಬುಧವಾರದಂದು ಪೂಂಛ್ ಜಿಲ್ಲೆಯಲ್ಲಿರುವ ನವಗ್ರಹ ಮಂದಿರಕ್ಕೆ ತೆರಳಿ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿದ್ದಾರೆ.

ಇದು ಈಗ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ನಾಯಕರು ಮೆಹಬೂಬಾ ಮುಫ್ತಿ ಅವರದ್ದು ರಾಜಕೀಯ ಗಿಮಿಕ್ ಎಂದು ಹೇಳಿದ್ದರೆ, ಮುಸ್ಲಿಂ ಧಾರ್ಮಿಕ ಮುಖಂಡರು ಇದು ಇಸ್ಲಾಂ ವಿರೋಧಿ ನಡೆ ಎಂದು ಕಿಡಿ ಕಾರಿದ್ದಾರೆ.

ಈ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಮೆಹಬೂಬಾ ಮುಫ್ತಿ, ಜಾತ್ಯಾತೀತ ರಾಷ್ಟ್ರವಾಗಿರುವ ಭಾರತದಲ್ಲಿ ನಾನು ವೈಯಕ್ತಿಕವಾಗಿ ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ. ನನ್ನ ಧರ್ಮ ಯಾವುದು ? ಅದನ್ನು ಹೇಗೆ ಪಾಲಿಸಬೇಕು ಎಂಬುದು ನನಗೆ ಗೊತ್ತಿದೆ. ನಾನು ಎಲ್ಲಿಗೆ ಹೋಗಬೇಕು ಎಂಬುದು ನನ್ನ ಸ್ವತಂತ್ರ ಆಯ್ಕೆ ಎಂದು ತಿರುಗೇಟು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular