HomeKarnatakaಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಬಾಲಕಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಬಾಲಕಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ಕೆಲ ದಿನಗಳ ಹಿಂದೆ ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ 5 ವರ್ಷದ ಬಾಲಕಿ ಶವ ಪತ್ತೆಯಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವು ಸಿಕ್ಕಿದೆ.

ಕೊಲೆಯಾಗಿದ್ದ 5 ವರ್ಷದ ಬಾಲಕಿಯ ಶವದ ಗುರುತು ಪತ್ತೆ ಮಾಡಿರುವ ರೈಲ್ವೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಮರಿಯಮ್ ಮೃತ ಬಾಲಕಿ. ಶಿವು ಹಾಗೂ ಹೀನಾ ದಂಪತಿಯ ಪುತ್ರಿ.

ಬಾಲಕಿಯ ಕೊಲೆ ಸುತ್ತ ಸಾಕಷ್ಟು ಅನುಮಾನ ವ್ಯಕ್ತವಾಗಿದೆ. ಬಾಲಕಿಯ ತಾಯಿ ಹೀನಾ ಪತಿಯನ್ನು ಬಿಟ್ಟು ರಾಜು ಎಂಬಾತನ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಆತನೊಂದಿಗೆ ಭಿಕ್ಷಾಟನೆ ಮಾಡುತ್ತಿದ್ದಳು. ಕೊಲೆಯಾಗಿರುವ ಬಾಲಕಿ ಕೂಡ ಇವರ ಜೊತೆ ಇರುತ್ತಿದ್ದಳು. ತನ್ನ ಅನೈತಿಕ ಸಂಬಂಧಕ್ಕೆ ಮಗಳು ಅಡ್ಡಿಯಾಗಿದ್ದಾಳೆ ಎಂದು ಪ್ರಿಯಕರ ರಾಜು ಜೊತೆ ಸೇರಿ ಮಗಳನ್ನು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶವ ಪತ್ತೆಯಾದ ದಿನದಿಂದ ಹೀನಾ ಹಾಗೂ ರಾಜು ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹೀನಾ ಹಾಗೂ ರಾಜು ಮೇಲೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿದ್ದು, ರೈಲ್ವೆ ಪೊಲೀಸರು ಇಬ್ಬರಿಗಾಗಿ ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular