ಒಂದೇ ರಾತ್ರಿಯಲ್ಲಿ ಮೇಕೆದಾಟು ಯೋಜನೆ ಆಗುತ್ತಾ? ಕೇಂದ್ರದ ವಿರುದ್ಧ ಸುಮ್ಮನೇ ಆರೋಪ ಬೇಡ; HDK ವಾಗ್ದಾಳಿ

ಮೈಸೂರು: ಮೇಕೆದಾಟು ಯೋಜನೆ ಮಾಡಲು ಒಂದೇ ರಾತ್ರಿಯಲ್ಲಿ ಅಗಿಬಿಡುತ್ತಾ? ಕಾವೇರಿ ನದಿ ನೀರು ಬಿಡುವ ವಿಚಾರವಾಗಿ ತಮಿಳುನಾಡು ಸಿಎಂ ಸ್ಟಾಲಿನ್ ಜೊತೆ ಚರ್ಚೆ ಮಡಿದ್ದಾರಾ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಈಗ ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ತಮಿಳು ನಡಿಗೆ ಹೆಚ್ಚು ನೀರು ಹೋಗುತ್ತಿದೆ. ಈ ವಿಚಾರವಾಗಿ ಟೆಕ್ನಿಕಲ್ ಆಗಿ ಚರ್ಚೆ ಮಾದಿದರೆ ಒಳ್ಳೆಯದು ಎಂದರು.

ಮೇಕೆದಾಟು ಯೋಜನೆ ಒಂದೇ ದಿನದಲ್ಲಿ ಆಗುವುದಿಲ್ಲ. ಯೋಜನೆ ಬಗ್ಗೆ ನಾನೂ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವುದೇ ವಿಶೇಷ ಅನುದಾನ ನೀಡದೇ ಅನ್ಯಾಯ ಮಾಡಲಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಕಾಂಗ್ರೆಸ್ ನವರು ಈ ನಡವಳಿಕೆ ಬದಲಿಸಿಕೊಳ್ಳಬೇಕು. ಮೊದಲು ನಿಮ್ಮ ಸಣ್ಣತನ ಬಿಟ್ಟುಬಿಡಿ. ಕೇಂದ್ರ ಸರ್ಕಾರದ ಬಗ್ಗೆ ಸುಮ್ಮನೇ ಆರೋಪ ಮಾಡುತ್ತಾ ತಿರುಗಾಡುತ್ತಿರುವುದನ್ನು ನಿಲ್ಲಿಸಿ. ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಕೇಂದ್ರದ ಮುಂದೆ ಸಮರ್ಥವಾಗಿ ಇಡಬೇಕು. ಅದನ್ನು ಬಿಟ್ಟು ಎಲ್ಲದಕ್ಕೂ ಕೇಂದ್ರದ ವಿರುದ್ಧ ಆರೋಪ ಮಾಡುವುದಲ್ಲ ಎಂದು ಕಿಡಿಕಾರಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5,300 ಕೋಟಿ ಹಣ ಘೋಷಿಸಿದೆ. ಕೇಂದ್ರದಿಂದ ಕರ್ನಾಟಕಕ್ಕೆ ಯಾವುದೆ ಅನ್ಯಾಯವಾಗುತ್ತಿಲ್ಲ. ರಾಜ್ಯವೇ ಅನ್ಯಾಯ ಮಾಡಿಕೊಳ್ಳುತ್ತಿದೆ. ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಹಣ ಮೀಸಲಿಡಬೇಕು. ಆಗ ಮಾತ್ರ ಕೇಂದ್ರ ಸರ್ಕಾರ ತನ್ನ ಪಾಲಿನ ಹಣ ಬಿಡುಗಡೆ ಮಾಡುತ್ತದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read