HomeKarnatakaಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು ಯೋಜನೆ ಜಾರಿ

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು ಯೋಜನೆ ಜಾರಿ

“ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರ ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಭಾರತೀಯ ವಿಜ್ಞಾನ ಸಂಸ್ಥೆಯ ಜೆಜೆ ಟಾಟಾ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಮಾತನಾಡಿದರು.

“ನೀವೆಲ್ಲರೂ ಬೆಂಗಳೂರಿನಲ್ಲಿದ್ದೀರಿ. ಇಲ್ಲಿ 1.50 ಕೋಟಿ ಜನಸಂಖ್ಯೆ ಇದ್ದು, ವಿಶ್ವದಾದ್ಯಂತ ಕೈಗಾರಿಕೋದ್ಯಮಿಗಳು ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಇಡೀ ವಿಶ್ವ ಭಾರತವನ್ನು ಬೆಂಗಳೂರು ಮೂಲಕ ನೋಡುತ್ತಿದೆ. ಇಲ್ಲಿರುವ ಹವಾಮಾನ ಹಾಗೂ ಸಂಸ್ಕೃತಿ ಎಲ್ಲರ ಆಕರ್ಷಣೆಯಾಗಿದೆ. ಎಲ್ಲರೂ ಬೆಂಗಳೂರಿಗೆ ಬರಲು ಇಚ್ಛಿಸುತ್ತಿದ್ದಾರೆ” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಎಲ್ಲರಿಗೂ ನೀರು ಪೂರೈಸುವ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ ನಾವು ಸಮತೋಲಿದ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿದ್ದು, ಇತ್ತೀಚೆಗೆ ಸುಪ್ರೀಂಕೋರ್ಟ್ ಈ ಯೋಜನೆ ಪರವಾಗಿ ತೀರ್ಪು ನೀಡಿದೆ. ಆಮೂಲಕ ನಾವು ಈ ಯೋಜನೆ ಜಾರಿ ಮಾಡಲಿದ್ದು, ಕೇಂದ್ರ ಸರ್ಕಾರದ ಅನುಮತಿಗೆ ಕಾಯುತ್ತಿದ್ದೇವೆ. ಈ ಯೋಜನೆಯಿಂದ ಬೆಂಗಳೂರು ಸೇರಿದಂತೆ ಈ ಭಾಗದ ಪ್ರದೇಶಗಳಿಗೆ ಕುಡಿಯುವ ನೀರು ಹಾಗೂ 400 ಮೆಹಾವಾಟ್ ವಿದ್ಯುತ್ ಉತ್ಪಾದನೆಗೆ ಸಹಕಾರಿಯಾಗಲಿದೆ” ಎಂದು ಹೇಳಿದರು.

“ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ನಾವು ಪಾರದರ್ಶಕ ನೀತಿ ತಂದಿದ್ದೇವೆ. ಭೂಮಿ ಕಳೆದುಕೊಳ್ಳುವ ರೈತರಿಗೆ 2013ರ ಕಾಯ್ದೆ ಅನುಸಾರ ಉತ್ತಮ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. 2025ರ ಡಿಸೆಂಬರ್ ವೇಳೆಗೆ ನಮ್ಮಲ್ಲಿ 1.72 ಲಕ್ಷ ಎಕರೆಯಷ್ಟು ಕೃಷಿ ಭೂಮಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸಲಾಗಿದೆ. ಇನ್ನು ಅಣೆಕಟ್ಟು ಸುರಕ್ಷತಾ ಮಾರ್ಗಸೂಚಿಯಲ್ಲಿ ಅಣೆಕಟ್ಟಿನ ಸುತ್ತ 500 ಮೀಟರ್ ವರೆಗೂ ವಿಧಿಸಲಾಗಿರುವ ನಿಬಂಧನೆಯನ್ನು ಸಡಿಲಗೊಳಿಸಬೇಕು. ಆ ಮೂಲಕ ಅಣೆಕಟ್ಟುಗಳ ಬಳಿ ಪ್ರವಾಸೋದ್ಯಮಕ್ಕೆ ಅವಕಾಶ ಕಲ್ಪಿಸಿ ಸ್ಥಳೀಯ ಆರ್ಥಿಕತೆಗೆ ನೆರವಾಗಬೇಕು ಎಂದು ಕರ್ನಾಟಕ ಸರ್ಕಾರದ ಪರವಾಗಿ ಮನವಿ ಮಾಡುತ್ತೇನೆ” ಎಂದರು.

ಅಣೆಕಟ್ಟುಗಳು ದೇಶದ ಶಕ್ತಿ: “ಅಣೆಕಟ್ಟುಗಳು ನಮ್ಮ ದೇಶದ ಶಕ್ತಿ ಹಾಗೂ ಪ್ರಗತಿಯ ಪ್ರತೀಕ. ಅಣೆಕಟ್ಟುಗಳು ನಮ್ಮ ಭವಿಷ್ಯವನ್ನು ಕಾಪಾಡಿ, ರೈತರನ್ನು ಸಶಕ್ತರನ್ನಾಗಿ ಮಾಡುತ್ತದೆ. ಸ್ವಚ್ಛ ಇಂಧನ ಸೃಷ್ಟಿಸಿ, ನಮ್ಮ ಸಮುದಾಯವನ್ನು ಕಾಯುತ್ತಿವೆ. ನಮ್ಮ ಪೀಳಿಗೆಯನ್ನು ಸುಸ್ಥಿರವಾಗಿಟ್ಟು ಕಾಪಾಡುತ್ತಿರುವ ರಕ್ಷಕನಂತೆ ಕಾರ್ಯನಿರ್ವಹಿಸುತ್ತಿವೆ. ನೀರು ಸಮೃದ್ಧವಾದಷ್ಟು, ನಾಗರೀಕತೆ ಅಭಿವೃದ್ಧಿಯಾಗುತ್ತದೆ. ನಮ್ಮಲ್ಲಿರುವ ಅನೇಕ ಅಣೆಕಟ್ಟುಗಳು 60-70 ವರ್ಷಗಳ ಹಳೆಯದಾಗಿವೆ. ಹೀಗಾಗಿ ಅಣೆಕಟ್ಟುಗಳ ಮೂಲಸೌಕರ್ಯ ದುರಸ್ತಿ ಕಾಮಗಾರಿಗಳು ಅಗತ್ಯವಾಗಿವೆ” ಎಂದರು.

“ಅನಿರೀಕ್ಷಿತ ಹವಾಮಾನ ವೈಪರಿತ್ಯ ನಮಗೆ ಹೆಚ್ಚಿನ ಸವಾಲೊಡ್ಡಿದೆ. ಅತಿಯಾದ ಮಳೆ, ಪ್ರವಾಹ ದೇಶದೆಲ್ಲೆಡೆ ಸಮಸ್ಯೆಯಾಗಿ ತಲೆದೋರಿವೆ. ನಮ್ಮ ಊಹೆಗಳ ಆಧಾರದ ಮೇಲೆ ಭವಿಷ್ಯದ ಅಣೆಕಟ್ಟುಗಳ ನಿರ್ವಹಣೆ ಅಸಾಧ್ಯ. ಹೀಗಾಗಿ ಎಲ್ಲಾ ಸವಾಲಿಗೆ ಪೂರ್ವ ತಯಾರಿ ಮಾಡಿಕೊಳ್ಳುವ ಆಯ್ಕೆಯಾಗಿ ಉಳಿದಿಲ್ಲ, ಅನಿವಾರ್ಯತೆಯಾಗಿದೆ” ಎಂದು ತಿಳಿಸಿದರು.

“ಅಣೆಕಟ್ಟುಗಳ ಶಕ್ತಿ ಅಡಗಿರುವುದು ಅದನ್ನು ಹೇಗೆ ನಿರ್ಮಾಣ ಮಾಡಲಾಗಿದೆ ಎಂಬುದರ ಮೇಲೆ ಮಾತ್ರವಲ್ಲ, ಅದನ್ನು ಎಷ್ಟು ಉತ್ತಮವಾಗಿ ನಿರ್ವಹಣೆ ಮಾಡಲಾಗುತ್ತದೆ ಎಂಬುದರ ಮೇಲೂ ನಿಂತಿದೆ. ಭಾರತದಲ್ಲಿ ಸುಮಾರು 6500 ಅಣೆಕಟ್ಟುಗಳಿದ್ದು, ವಿಶ್ವದಲ್ಲಿ ಅತಿ ಹೆಚ್ಚು ಅಣೆಕಟ್ಟುಗಳಿರುವ ದೇಶಗಳ ಪೈಕಿ ಮೂರನೇ ಸ್ಥಾನದಲ್ಲಿದೆ. ಕರ್ನಾಟಕ ರಾಜ್ಯದಲ್ಲಿ 232 ಅಣೆಕಟ್ಟುಗಳಿದ್ದು, ದೇಶದ ಮೂರನೇ ಎರಡು ಭಾಗದಷ್ಟು ಅಣೆಕಟ್ಟುಗಳು 25 ವರ್ಷಕ್ಕಿಂತ ಹೆಚ್ಚು ವರ್ಷಗಳ ಕಾಲ ಹಳೆಯದಾಗಿವೆ. ಇದು ನಮ್ಮಲ್ಲಿ ಅಣೆಕಟ್ಟುಗಳ ವ್ಯವಸ್ಥಿತ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿರುವುದನ್ನು ಸಾರುತ್ತಿದೆ” ಎಂದು ಹೇಳಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular