HomeLatest NewsBIG NEWS: ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

BIG NEWS: ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೆಇಆರ್ ಎಸ್ (ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ) ನಿರ್ದೇಶಕರ ನೇತೃತ್ವದಲ್ಲಿ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ತಂಡವು ಉಪ ಮುಖ್ಯ ಇಂಜಿನಿಯರ್ ಹಾಗೂ ಸಿಬ್ಬಂದಿಯನ್ನು ಒಳಗೊಂಡಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಕೆಲಸ ನಿರ್ವಹಿಸಲಿದೆ. ರಾಮನಗರದಲ್ಲೇ ಮೇಕೆದಾಟು ಯೋಜನೆ ಕಚೇರಿ ಸ್ಥಾಪಿಸಲಾಗುವುದು ಎಂದು ತಿಳಿಸಲಾಗಿದೆ.

ನವೆಂಬರ್ 18ರಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಒಂದು ಮುಖ್ಯ ಇಂಜಿನಿಯ‌ರ್ ಕಚೇರಿ ಹಾಗೂ ಒಂದು ಅಧೀಕ್ಷಕ ಇಂಜಿನಿಯರ್ ಕಚೇರಿಯನ್ನು ಆರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಹೊಸದಾಗಿ ಕಚೇರಿ ಸ್ಥಾಪನೆ ಹಾಗೂ ಹುದ್ದೆಗಳ ನೇಮಕಕ್ಕೆ ಆರ್ಥಿಕ ಇಲಾಖೆಯ ಅನುಮತಿ ಅಗತ್ಯವಾಗಿದ್ದು, ಇದಕ್ಕೆ ಬಹಳಷ್ಟು ಸಮಯಾವಕಾಶ ಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಈ ಯೋಜನೆ ಜಾರಿಯ ಜವಾಬ್ದಾರಿಯನ್ನು ಕೆಇಆರ್ ಎಸ್ ನಿರ್ದೇಶಕರಿಗೆ ವಹಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಇಆರ್ ಎಸ್ ಸಂಸ್ಥೆ ತನ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ನೌಕರರನ್ನು ಒಳಗೊಂಡು ತಂಡವನ್ನು ರಚಿಸಿ ಮೇಕೆದಾಟು ಯೋಜನೆಯ ಜಾರಿಯ ಜವಾಬ್ದಾರಿಯನ್ನು ನೀಡಲಾಗಿದೆ. ಈ ತಂಡಕ್ಕೆ ಓರ್ವ ಕಾರ್ಯಪಾಲಕ ಇಂಜಿನಿಯರ್, ಮೂವರು ತಾಂತ್ರಿಕ ಸಹಾಯಕರು, ಆರು ಸಹಾಯಕ ಇಂಜಿನಿಯರ್, ಓರ್ವ ಸಹಾಯಕ ಆಡಳಿತಾಧಿಕಾರಿ, ಓರ್ವ ಲೆಕ್ಕಾಧೀಕ್ಷಕರು, ಅಧೀಕ್ಷಕರು, ಪ್ರಥಮ ದರ್ಜೆ ಲೆಕ್ಕ ಸಹಾಯಕರು, ಇಬ್ಬರು ಪ್ರಥಮ ದರ್ಜೆ ಸಹಾಯಕರು, ಓರ್ವ ದ್ವಿತಿಯ ದರ್ಜೆ ಲೆಕ್ಕ ಸಹಾಯಕರು, ನಾಲ್ವರು ದ್ವಿತೀಯ ದರ್ಜೆ ಸಹಾಯಕರು, ಓರ್ವ ಶೀಘ್ರಲಿಪಿಗಾರರು, ನಾಲ್ವರು ಬೆರಳಚ್ಚುಗಾರರು, ಓರ್ವ ವಾಹನ ಚಾಲಕರ, ಇಬ್ಬರು ಗ್ರೂಪ್ ಡಿ ಸಿಬ್ಬಂದಿ, 1 ಕಾವಲುಗಾರನನ್ನು ನೇಮಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular