HomeKarnatakaBIG UPDATE : ಮೇಲುಕೋಟೆ 'ಶಿಕ್ಷಕಿ' ಕೊಲೆ ಪ್ರಕರಣ : 30 ಗಂಟೆಗಳಲ್ಲಿ 'ಆರೋಪಿ' ಅರೆಸ್ಟ್

BIG UPDATE : ಮೇಲುಕೋಟೆ ‘ಶಿಕ್ಷಕಿ’ ಕೊಲೆ ಪ್ರಕರಣ : 30 ಗಂಟೆಗಳಲ್ಲಿ ‘ಆರೋಪಿ’ ಅರೆಸ್ಟ್

ಮಂಡ್ಯ : ಮೇಲುಕೋಟೆ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ 30 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಶಿಕ್ಷಕಿ  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತೀಶ್ (22) ಎಂಬ ಯುವಕನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕೊಲೆಯಾದ ಮಹಿಳೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದಾಳೆ. ದೀಪಿಕಾ ಮೇಲುಕೋಟೆಯ ಎಸ್ಇಟಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಜನವರಿ 20ರ ಮಧ್ಯಾಹ್ನನಿಂದ ದೀಪಿಕಾ ನಾಪತ್ತೆಯಾಗಿದ್ದಳು. ನಾಪತ್ತೆಯಾದ ಬಗ್ಗೆ ಕುಟುಂಬಸ್ಥರು ಜ.20ರ ಸಂಜೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ನಂತರ ಮೇಲುಕೋಟೆಯ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ ತನಿಖೆ ಆರಂಭಿಸಿದ ಡಿವೈಎಸ್ಪಿ ಮುರುಳಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ತನಿಖೆಯಿಂದ ಕೊಲೆಗೆ ನಿಖರ ಕಾರಣ ತಿಳಿದು ಬರಬೇಕಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular