HomeKarnatakaಮಾರ್ಚ್ 23ರಿಂದ ಮೇಲುಕೋಟೆ ಚಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವ ಆರಂಭ

ಮಾರ್ಚ್ 23ರಿಂದ ಮೇಲುಕೋಟೆ ಚಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವ ಆರಂಭ

ಮಂಡ್ಯ: ಮೇಲುಕೋಟೆ ಚಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವ ಮಾರ್ಚ್ 23ರಿಂದ ಆರಂಭವಾಗಲಿದ್ದು, ಏಪ್ರಿಲ್ 4ರವರೆಗೆ ನಡೆಯಲಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ವೈರಮುಡಿ ಬ್ರಹ್ಮೋತ್ಸವ ಪೂರ್ವ ಸಿದ್ಧತಾ ಸಭೆ ಬಳಿಕ ಮಾತನಾಡಿದ ಸಚಿವರು, ಉತ್ಸವದ ಪ್ರಮುಖ ಆಕರ್ಷಣೆಯಾದ ವೈರಮುಡಿ ಕಿರೀಟ ಧಾರಣೆಯು ಮಾರ್ಚ್ 28ರಿಂದು ಜರುಗಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ ಭಕ್ತರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಮತ್ತು ಬಿಗಿ ಭದ್ರತೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಲಕ್ಷಾಂತರ ಭಕ್ತರು ಉತ್ಸವದಲ್ಲಿ ಭಾಗವಹಿಸಲಿದ್ದು, ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಈಗಿನಿಂದಲೇ ಕಾರ್ಯಪ್ರವೃತರಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವೈರಮುಡಿ ಬ್ರಹ್ಮೋತ್ಸವದ ವೇಳೆ ಕೀರೀಟಧಾರಣಾ ಮೆರವಣಿಗೆಯ ಸಂದರ್ಭದಲ್ಲಿ ಶಾಂತಿಯುತವಾಗಿ ಜನರು ದೇವರನ್ನು ನೋಡುವಂತೆ ವ್ಯವಸ್ಥೆ ಕಲ್ಪಿಸಬೇಕು. ಈ ಸಂಬಂಧ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ದೇವಸ್ಥಾನದ ಅರ್ಚಕರಿಗೆ ಸಚಿವರು ಸೂಚಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular