HomeIndiaನಿರ್ಬಂಧದ ನಡುವೆಯೂ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ; ವಿದ್ಯಾರ್ಥಿಗಳ ಅರೆಸ್ಟ್‌

ನಿರ್ಬಂಧದ ನಡುವೆಯೂ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ; ವಿದ್ಯಾರ್ಥಿಗಳ ಅರೆಸ್ಟ್‌

ಪ್ರಧಾನಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿದ್ದ ಭಾರತೀಯ ರಾಷ್ಟ್ರ ಸಮಿತಿಯ ವಿದ್ಯಾರ್ಥಿಗಳ ವಿಭಾಗದ ಸದಸ್ಯರನ್ನು ಹೈದರಾಬಾದ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಉಸ್ಮಾನಿಯಾ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಈ ಘಟನೆ ನಡೆದಿದೆ.

ಬಿಆರ್‌ಎಸ್ ವಿದ್ಯಾರ್ಥಿಗಳ ವಿಭಾಗದ ಸದಸ್ಯರು ಉಸ್ಮಾನಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿರುವ ಆರ್ಟ್ಸ್ ಕಾಲೇಜಿನಲ್ಲಿ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನಕ್ಕಾಗಿ ಜಮಾಯಿಸಿದ್ದರು. ಹೈದರಾಬಾದ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಕ್ರೀನಿಂಗ್ ನಿಲ್ಲಿಸಿದರು. ನಂತರ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಉಸ್ಮಾನಿಯಾ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಗೆ ರವಾನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಮವಾರ, ತಮಿಳುನಾಡಿನ ನಾಗಪಟ್ಟಣಂನಲ್ಲಿ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಸಾರ್ವಜನಿಕ ಪ್ರದರ್ಶನದ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆಯಿತು. ಈ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುಮಾರು 50 ಪೊಲೀಸರನ್ನು ನಿಯೋಜಿಸಲಾಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular