ಅರ್ಜುನ ಆನೆ ಸಾವಿನ ಬಗ್ಗೆ ತನಿಖೆಗೆ ಸಮಿತಿ ರಚನೆ

ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟ ಅರ್ಜುನ ಆನೆ ಸಾವಿನ ಕುರಿತಾಗಿ ತನಿಖೆ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅರ್ಜುನ ಆನೆ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದ ಸಚಿವರು ಮಾತನಾಡಿ, ಅರಣ್ಯ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲಾಗಿದೆ. ಈ ಸಮಿತಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದೆ. ಅರ್ಜುನ ಆನೆ ಸಾವಿನ ಕುರಿತಾಗಿ ಸಮಿತಿ ತನಿಖೆ ನಡೆಸಿ 15 ದಿನಗಳ ಒಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದು, ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಎಂಟು ಬಾರಿ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಕಳೆದುಕೊಂಡಿರುವುದು ದುಃಖದ ವಿಷಯವಾಗಿದೆ. ಅರ್ಜುನ ಆನೆಯ ಸಮಾಧಿ ಸ್ಥಳ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read