ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ ಕುರಿತ ತಡೆಯಾಜ್ಞೆ ಮಾರ್ಪಡಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಋತುಚಕ್ರ ರಜೆ ಕುರ್ತ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಆದರೆ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಎಜಿ ಶಶಿಕಿರಣ್ ಶಟ್ಟಿ ಮೇಲ್ಮನವಿ ಮಾಡಿದ್ದರು. ರಾಜ್ಯ ಸರ್ಕಾರದ ವಾದ ಕೇಳದೇ ಹೈಕೋರ್ಟ್ ಏಕಸದಸ್ಯಪೀಠ ತಡೆಯಾಜ್ಞೆ ನೀಡಿದೆ. ಋತುಚಕ್ರ ರಜೆ ಆದೇಶಕ್ಕೂ ಮುನ್ನ ಸರ್ಕಾರ ಕಾನೂನು ಪಾಲಿಸಿದೆ. ಹೀಗಾಗಿ ತಡೆಯಾಜ್ಞೆ ಮಾರ್ಪಡಿಸುವಂತೆ ಅಡ್ವಕೇಟ್ ಜನರಲ್ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಸರ್ಕಾರದ ವಾದ ಆಲಿಸಿದ ಬಳಿಕವೇ ಅರ್ಜಿ ಬಗ್ಗೆ ಆದೇಶ ನೀಡಲಾಗುವುದು ಎಂದಿರುವ ಹೈಕೋರ್ಟ್ ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ನಿಗದಿಪಡಿಸಿದೆ. ಹೀಗಾಗಿ ಸದ್ಯ ಋತುಚಕ್ರ ರಜೆ ಆದೇಶಕ್ಕೆ ತಡೆಯಾಜ್ಞೆಯಿಲ್ಲ ಎಂದು ತಿಳಿದುಬಂದಿದೆ.
ಮಹಿಳೆಯರ ಋತುಚಕ್ರದ ವೇಳೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಬೆಂಗಳೂರು ಹೋಟೆಲ್ ಗಳ ಮಾಲೀಕರ ಸಂಘದ ಅಧ್ಯಕ್ಷ ಹೆಚ್.ಎಸ್.ಸುಬ್ರಹ್ಮಣ್ಯ ಸರ್ಕಾರದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡಬೇಕು ಎಂದು ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ಇದು ಅಸಂವಿಧಾನಿಕ. ಸಂವ್ಧಾನದ 14 ವಿಧಿಗೆ ವಿರುದ್ಧವಾಗಿದೆ ಆದ್ದರಿಂದ ಇದನ್ನು ರದ್ದುಗೊಳಿಸುವಂತೆ ಅರ್ಜಿದಾರರು ಮನವಿ ಮಾಡಿದ್ದರು.
ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿರುವ ಹೈಕೋರ್ಟ್ ನಾಳೆ ಸರ್ಕಾರದ ಪರವಕೀಲರ ವಾದ ಆಲಿಸಿದ ಬಳಿಕ ಈ ಕುರುತು ಆದೇಶ ಹೊರಡಿಸಲಿದೆ.
