HomeLatest NewsBIG NEWS : ರಾಜ್ಯದ ಮಹಿಳಾ ನೌಕರರಿಗೆ 'ಋತುಚಕ್ರ ರಜೆ' ಮಂಜೂರು : ಸರ್ಕಾರದಿಂದ...

BIG NEWS : ರಾಜ್ಯದ ಮಹಿಳಾ ನೌಕರರಿಗೆ ‘ಋತುಚಕ್ರ ರಜೆ’ ಮಂಜೂರು : ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆಯ ಸೌಲಭ್ಯವನ್ನು ಓದಲಾದ ಸರ್ಕಾರಿ ಆದೇಶದಲ್ಲಿ ಮಂಜೂರು ಮಾಡಲಾಗಿದೆ.

ರಾಜ್ಯ ಮಹಿಳಾ ಸರ್ಕಾರಿ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಲು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರಿ ಆದೇಶ ಸಂಖ್ಯೆ: ಆಇ 10 ಸೇನಿಸೇ 2025, ಬೆಂಗಳೂರು, ದಿನಾಂಕ:2.12.2025
ಸರ್ಕಾರವು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಕೆಳಕಂಡ ಷರತ್ತುಗಳಿಗೊಳಪಟ್ಟು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರು ಮಾಡಿ ಆದೇಶಿಸಿದೆ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  1. ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ಮಹಿಳಾ ಸರ್ಕಾರಿ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.
  2. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆಯನ್ನು ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.
  3. ಈ ರಜೆಯನ್ನು ರಜೆ/ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು.
    .4.ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸತಕ್ಕದ್ದಲ್ಲ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular