HomeLatest Newsಋತುಚಕ್ರ ರಜೆ: ಸರ್ಕಾರದ ನಿರ್ಧಾರ ಸಮರ್ಥಿಸಿ ಅರ್ಜಿ, ವಿಚಾರಣೆಗೆ ಹೈಕೋರ್ಟ್ ಅಸ್ತು

ಋತುಚಕ್ರ ರಜೆ: ಸರ್ಕಾರದ ನಿರ್ಧಾರ ಸಮರ್ಥಿಸಿ ಅರ್ಜಿ, ವಿಚಾರಣೆಗೆ ಹೈಕೋರ್ಟ್ ಅಸ್ತು

ಬೆಂಗಳೂರು: ಋತುಚಕ್ರದ ರಜೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ಧಾರ ಸಮರ್ಥಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಮಧ್ಯಂತರ ಅರ್ಜಿಗಳ ವಿಚಾರಣೆಗೆ ನ್ಯಾಯಾಲಯ ಅಸ್ತು ಎಂದಿದೆ.

ರಾಜ್ಯದ ಉದ್ದಿಮೆಗಳ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ನೀಡಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದನ್ನು ವಿರೋಧಿಸಿ ಹಲವರು ಅರ್ಜಿ ಸಲ್ಲಿಸಿದ್ದಾರೆ. ರಜೆಯ ಪರವಾಗಿ ಐದು ವಕೀಲರು ಮತ್ತು ಎರಡು ಸಂಘಟನೆಗಳಿಂದ ಅರ್ಜಿ ಸಲ್ಲಿಕೆಯಾಗಿದೆ.

ಎಐಸಿಟಿಯು, ಎಐಡಿಡಬ್ಲ್ಯೂಎ, ಬೆಂಗಳೂರಿನ 5 ಮಂದಿ ಮಹಿಳಾ ವಕೀಲರು ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಕರ್ನಾಟಕ ಎಂಪ್ಲಾಯರ್ಸ್ ಅಸೋಸಿಯೇಷನ್, ಬೆಂಗಳೂರು ಹೋಟೆಲ್ಸ್ ಅಸೋಸಿಯೇಷನ್ ಮತ್ತು ವಿವಿಧ ಖಾಸಗಿ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿಗಳು ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2 ಸಂಘಟನೆಗಳು ಮತ್ತು ಮಹಿಳಾ ವಕೀಲರು ಸರ್ಕಾರದ ಕ್ರಮವನ್ನು ಸಮರ್ಥಿಸಿದ್ದಾರೆ. ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಬೆಂಗಳೂರು ಎಂಪ್ಲಾಯರ್ಸ್ ಅಸೋಸಿಯೇಷನ್ ಕೂಡ ಹೈ ಕೋರ್ಟ್ ಮೆಟ್ಟಿಲೇರಿದೆ. ನ್ಯಾಯಮೂರ್ತಿ ಅನಂತ್ ರಾಮನಾಥ ಹೆಗಡೆ ಅವರ ಪೀಠ ಎಲ್ಲ ಮಧ್ಯಂತರ ಅರ್ಜಿ ವಿಚಾರಣೆಗೆ ಅಂಗೀಕರಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular