HomeKarnatakaವರದಕ್ಷಿಣೆಗಾಗಿ ಪತ್ನಿಗೆ ಮಾನಸಿಕ, ದೈಹಿಕ ಕಿರುಕುಳ: ಪತಿಗೆ 3 ವರ್ಷ ಶಿಕ್ಷೆ, ದಂಡ

ವರದಕ್ಷಿಣೆಗಾಗಿ ಪತ್ನಿಗೆ ಮಾನಸಿಕ, ದೈಹಿಕ ಕಿರುಕುಳ: ಪತಿಗೆ 3 ವರ್ಷ ಶಿಕ್ಷೆ, ದಂಡ

ಶಿವಮೊಗ್ಗ: ವರದಕ್ಷಿಣೆಗಾಗಿ ಪತ್ನಿಗೆ ದೈಹಿಕ, ಮಾನಸಿಕ ಹಿಂಸೆ ನೀಡಿದ ವ್ಯಕ್ತಿಗೆ ಶಿವಮೊಗ್ಗ ಜೆ.ಎಂ.ಎಫ್.ಸಿ. ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ಬಳ್ಳಾರಿ ಜಿಲ್ಲೆಯ ಕೊಟ್ಟೂರು ವಾಸಿ ಮಂಜುನಾಥ್ ಶಿಕ್ಷೆಗೊಳಗಾದ ವ್ಯಕ್ತಿ. ಇವರು ತಮ್ಮ ಪತ್ನಿ ಸುಮಾ ಅವರಿಗೆ ಹೆಚ್ಚಿನ ವರದಕ್ಷಿಣೆ, ಸೈಟ್ ಹಾಗೂ ಬಂಗಾರ ತರಲು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾಗಿ ಹಾಗೂ ಜೀವ ಬೆದರಿಕೆ ಹಾಕಿದ್ದಾಗಿ 2017ರಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖಾಧಿಕಾರಿ ಪ್ರಭಾವತಿ ಸಿ. ಇವರು ಪ್ರಕರಣದ ತನಿಖೆ ನಡೆಸಿ 2018ರಲ್ಲಿ 2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿರುತ್ತಾರೆ. ಸಾಕ್ಷಿ ವಿಚಾರಣೆ ನಡೆಸಿ ಪರಸ್ಪರ ವಾದವನ್ನು ಆಲಿಸಿದ ನ್ಯಾಯಾಧೀಶರಾದ ಸಿದ್ಧರಾಜು ಎನ್.ಕೆ. ಇವರು ದಿ:24/06/2026 ರಂದು ಆರೋಪಿ ಮಂಜುನಾಥನಿಗೆ ಕಲಂ.: 498(ಎ) ಐಪಿಸಿ ಅಪರಾಧಕ್ಕೆ ಮೂರು ವರ್ಷ ಸಾದಾ ಸಜೆ ಶಿಕ್ಷೆ ಹಾಗೂ ಹತ್ತು ಸಾವಿರ ರೂ.ಗಳ ದಂಡ ಹಾಗೂ ಕಲಂ.506 ಐಪಿಸಿಗೆ 2 ವರ್ಷ ಸಾದಾ ಶಿಕ್ಷೆ ಮತ್ತು ರೂ. 5000 ದಂಡವನ್ನು ವಿಧಿಸಿ ತೀರ್ಪು ನೀಡಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭಿಯೋಜನೆಯ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಜಿ.ಕೆ. ಕಿರಣ್‌ಕುಮಾರ್ ವಾದ ಮಂಡಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular