HomeKarnatakaಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮೊಬೈಲ್ ನಲ್ಲೇ ಇ-ಕೆವೈಸಿ ಸೌಲಭ್ಯ

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮೊಬೈಲ್ ನಲ್ಲೇ ಇ-ಕೆವೈಸಿ ಸೌಲಭ್ಯ

ಬೆಂಗಳೂರು: ಪಡಿತರ ಚೀಟಿದಾರರಿಗೆ ಮೊಬೈಲ್ ನಲ್ಲಿ ಇ-ಕೆವೈಸಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಬಳಿಕ ಮಾತನಾಡಿ, ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ತೆರಳುವ ಒತ್ತಡ ಕಡಿಮೆ ಮಾಡಲು ಮೊಬೈಲ್ ಮೂಲಕವೇ ಮುಖಚರ್ಯೆ ಬಳಸಿ ಇ-ಕೆವೈಸಿ ಮಾಡಿಕೊಳ್ಳುವ ಸೌಲಭ್ಯ ವಾರದಲ್ಲೇ ಜಾರಿಯಾಗಲಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಆದೇಶದಂತೆ ಪಡಿತರ ಚೀಟಿ ಹೊಂದಿರುವ ಸದಸ್ಯರು ಪ್ರತಿ ಐದು ವರ್ಷಕ್ಕೊಮ್ಮೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. 2.67 ಕೋಟಿ ಫಲಾನುಭವಿಗಳ ಇ-ಕೆವೈಸಿ ಪ್ರಕ್ರಿಯೆ ನಡೆಯುತ್ತಿದ್ದು, ಇದುವರೆಗೆ 97.54 ಲಕ್ಷ ಫಲಾನುಭವಿಗಳು ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಕೆಲವು ಕಡೆ ಸರ್ವರ್ ಮತ್ತು ತಾಂತ್ರಿಕ ಸಮಸ್ಯೆ ಉಂಟಾಗುತ್ತಿವೆ. ಯಾವುದೇ ಸ್ಥಳದಲ್ಲಿ ಸಮಸ್ಯೆ ಬಂದ ಕೂಡಲೇ ಇಲಾಖೆಯ ಅಧಿಕಾರಿಗಳು ಸಮಸ್ಯೆ, ಬಗೆಹರಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇ-ಕೆವೈಸಿ ಪ್ರಕ್ರಿಯೆ ಸುಗಮವಾಗಿ ನಡೆಯುವಂತೆ ಮಾಡಲು ಆಹಾರ ಅಪ್ಲಿಕೇಶನ್ ನಲ್ಲಿ ಪ್ರತ್ಯೇಕ ಯುಆರ್ಎಲ್ ಒದಗಿಸಲಾಗಿದೆ. ಮೊದಲ ಬಾರಿಗೆ ಆಹಾರ ಇಲಾಖೆಯ ಸರ್ವರ್ ಸಾಮರ್ಥ್ಯ ಮತ್ತು ಕಾರ್ಯಕ್ಷಮತೆ ಪರಿಶೀಲಿಸಲು ಅಣಕು ಒತ್ತಡ ಪರೀಕ್ಷೆ ನಡೆಸಲಾಗುತ್ತಿದೆ. ಮೊಬೈಲ್ ಮೂಲಕವೇ ಮುಖಚರ್ಯೆ ಬಳಸಿ ಮಾಡಿಕೊಳ್ಳುವ ಸೌಲಭ್ಯ ವಾರದಲ್ಲಿ ಅನುಷ್ಠಾನವಾಗಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಪಡಿತರ ಚೀಟಿದಾರರು ಮನೆಯಲ್ಲೇ ಕುಳಿತು ಮೊಬೈಲ್ ಮೂಲಕ ಇ-ಕೆವೈಸಿ (e-KYC) ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಲಕ್ಷಾಂತರ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಸೆಪ್ಟೆಂಬರ್ 30ರೊಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

ಮೊಬೈಲ್ ಮೂಲಕ ಮಾಡುವ ವಿಧಾನ: ‘ಮೇರಾ ರೇಷನ್’ (Mera Ration) ಅಥವಾ ಸಂಬಂಧಿತ ಆಪ್ ಹಾಗೂ ಆಧಾರ್ ಫೇಸ್ ಆರ್ ಡಿ (Aadhaar FaceRD) ಮೊಬೈಲ್ ಅಪ್ಲಿಕೇಶನ್ ಬಳಸಿ ಮುಖದ ಗುರುತು (Facial Recognition) ಅಥವಾ ಒಟಿಪಿ (OTP) ಮೂಲಕ ಮನೆಯಲ್ಲೇ ಇ-ಕೆವೈಸಿ ಮಾಡಿಕೊಳ್ಳಬಹುದು.

ಆಫ್‌ಲೈನ್ ಸೌಲಭ್ಯ: ಮೊಬೈಲ್ ಮೂಲಕ ಮಾಡಲು ತೊಂದರೆಯಾದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿ (Ration Shop) ಅಥವಾ ಗ್ರಾಮ ಒನ್ / ಸಿಎಸ್‌ಸಿ (CSC) ಕೇಂದ್ರಗಳಿಗೆ ಭೇಟಿ ನೀಡಿ ಬೆರಳಚ್ಚು (Biometric) ಮೂಲಕವೂ ಇ-ಕೆವೈಸಿ ಮಾಡಿಸಿಕೊಳ್ಳಬಹುದು.

ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶ

PGCET-2026: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಸೆ.17ರಂದು ಬೆಳಿಗ್ಗೆ‌ 9ಗಂಟೆವರೆಗೆ ಸಮಯ ನೀಡಲಾಗಿದೆ.

ಸೆ.17ರಂದು ಸಂಜೆ 6ರ ನಂತರ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. ಅವಶ್ಯ ಇದ್ದಲ್ಲಿ ಆಯ್ಕೆಗಳನ್ನು ಅದಲು-ಬದಲು ಮಾಡಿಕೊಳ್ಳುವುದಕ್ಕೆ ಅಥವಾ ಹೊಸದಾಗಿ ಹಾಕಿಕೊಳ್ಳುವುದಕ್ಕೆ ಹಾಗೂ ತೆಗೆದುಹಾಕುವುದಕ್ಕೆ ಸೆ.19ರಂದು ಬೆಳಿಗ್ಗೆ 11ರವರೆಗೆ ಅವಕಾಶ ನೀಡಲಾಗಿದೆ.

ಸೆ.19ರಂದು ಸಂಜೆ 5ಕ್ಕೆತಾತ್ಕಾಲಿಕ ಹಾಗೂ ಸೆ.21ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೆ.22ರಿಂದ 24ರವರೆಗೆ ಚಾಯ್ಸ್ ಆಯ್ಕೆಗೆ ಅವಕಾಶ ನೀಡಲಾಗಿದೆ. ಚಾಯ್ಸ್ 1 ಮತ್ತು 2 ಆಯ್ಕೆ ಮಾಡಿದವರು ಸೆ.25ರೊಳಗೆ ಶುಲ್ಕ ಪಾವತಿಸಬೇಕು. ಚಾಯ್ಸ್ – 1 ಆಯ್ಕೆ ಮಾಡಿದವರು ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸೆ.26ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular